ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಬಂಧನ

Cricket Betting
Published on

ಮೈಸೂರು: ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಇಬ್ಬರನ್ನು ಮೈಸೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಹೆಬ್ಬಾಳು ಕೈಗಾರಿಕಾ ಪ್ರದೇಶದ ನೇಸರ ಡಾಬಾದಲ್ಲಿ ಇಬ್ಬರು ವ್ಯಕ್ತಿಗಳು ಮೊಬೈಲ್ ೆನ್‌ನಲ್ಲಿ ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದರು.

ಈ ಕುರಿತು ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ಮಾಡಿ, ಬೆಟ್ಟಿಂಗ್ ಆಡುತ್ತಿದ್ದ ಇಬ್ಬರನ್ನು ಬಂಧಿಸಿ, 2 ಮೊಬೈಲ್ ಜಪ್ತಿ ಮಾಡಿದ್ದಾರೆ.

ಹೆಬ್ಬಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net