ಕ್ರಿಯೇಟಿವ್ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

4-ANP-P3 SPRTS
ಸಾಗರ ತಾಲೂಕು ಮಟ್ಟದ ಕ್ರೀಡಾಕೂಟದ ಕಬಡ್ಡಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ಆಚಾಪುರದ ಕ್ರಿಯೇಟಿವ್ ಇಂಟರ್ ನ್ಯಾಷನಲ್ ಶಾಲಾ ವಿದ್ಯಾರ್ಥಿಗಳು.
Published on

ಆನಂದಪುರ: ಆಚಾಪುರದ ಕ್ರಿಯೇಟಿವ್ ಇಂಟರ್‌ನ್ಯಾಷನಲ್ ಶಾಲೆ ವಿದ್ಯಾರ್ಥಿಗಳು ಬಾಲಕರ ಕಬಡ್ಡಿ ವಿಭಾಗದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಗರದ ನೆಹರು ಮೈದಾನದಲ್ಲಿ ಏರ್ಪಡಿಸಿದ್ದ ಸಾಗರ ತಾಲೂಕು ಮಟ್ಟದ ಕ್ರಿಡಾಕೂಟದಲ್ಲಿ ವಿದ್ಯಾರ್ಥಿಗಳಾದ ಎಂ.ಸಮೃದ್ಧ, ವಿ.ವಿನೂತಾ, ಬಿ.ಗಗನಾ, ಸಿ.ಪ್ರೀತಮ್, ವಿ.ಪಾರ್ಥ, ಆಕಾಶ, ನಿತಿನ್, ಸಮರ್ಥ, ಶಶಾಂಕ ಉತ್ತಮ ಕ್ರೀಡಾ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು. ದೈಹಿಕ ಶಿಕ್ಷಣ ಶಿಕ್ಷಕ ಎಂ.ಆರ್.ಉಪೇಂದ್ರ, ಶಿಕ್ಷಕರಾದ ಕೃಷ್ಣಮೂರ್ತಿ, ಸಂತೋಷ್, ಗೋಪಿ ಸೇರಿದಂತೆ ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನು ಅಭಿನಂದಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net