ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ

bkt-24-6
ಜಿಲ್ಲಾಧಿಕಾರಿಗಳು ಬ್ಯಾಟಿಂಗ್ ಮಾಡಿದರು.
Published on

ಬಾಗಲಕೋಟೆ: ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಸ್ಥಿರವಾಗಿರಲು ಸಾದ್ಯವಿದ್ದು, ಸದಾ ಒತ್ತಡದಲ್ಲಿ ಕಾರ್ಯನಿರ್ವಹಿಸುವ ನೌಕರರು ಪ್ರತಿನಿತ್ಯ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ನೂತನ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಸಲಹೆ ನೀಡಿದರು.

ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಕಂದಾಯ ಇಲಾಖೆ, ಬಾಗಲಕೋಟೆ ಉಪವಿಭಾಗ ಕಾರ್ಯಾಲಯ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಕಂದಾಯ ನೌಕರರ ಕ್ರೀಡಾಕೂಟಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಹೆಚ್ಚು ಉತ್ಸಾಹದಿಂದ ಕಾರ್ಯನಿರ್ವಹಿಸಲು ಸಾಧ್ಯ. ಕ್ರೀಡಾಸಕ್ತಿಯಿಂದ ಎಲ್ಲರೂ ಆಟ ಆಡಬೇಕು ಎಂದರು.

ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಬಾಗಲಕೋಟೆ ತಹಶೀಲ್ದಾರ ಅಮರೇಶ ಪಮ್ಮಾರ, ಬಾದಾಮಿ ತಹಶೀಲ್ದಾರ ಜೆ.ಬಿ.ಮಜ್ಜಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಕ್ರೀಡಾ ಜ್ಯೋತಿಯನ್ನು ಸ್ವಾಗತಿಸಿದರು. ನಂತರ ಉಪವಿಭಾಗಾಧಿಕಾರಿಗಳು ಮಾಡಿದ ಬಾಲಿಂಗ್‍ಗೆ ಜಿಲ್ಲಾಧಿಕಾರಿಗಳು ಬ್ಯಾಟಿಂಗ್ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net