

ಚಿಕ್ಕಮಗಳೂರು: ವಿದ್ಯಾರ್ಥಿಗಳು ಸಾಮೂಹಿಕವಾಗಿ ಕ್ರೀಡಾಕೂಟಗಳಲ್ಲಿ ಭಾಗವಹಿಸಿದಾಗ ಆರೋಗ್ಯ, ದೈಹಿಕ, ಮಾನಸಿಕ, ಶಾಂತಿ, ಶಿಸ್ತು, ಸಹನೆ, ಆತ್ಮವಿಶ್ವಾಸ ಮೂಡಲು ಸಹಕಾರಿಯಾಗಲಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಅಭಿಪ್ರಾಯಪಟ್ಟರು.
ನಗರದ ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ತಾಪಂ, ಜಿಪಂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ತೊಗರಿಹಂಕಲ್ ಹೊಸಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಾಗರ ಹೋಬಳಿ ವಲಯಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆ ಹಾಗೂ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ಜಿಲ್ಲೆ, ರಾಜ್ಯ, ರಾಷ್ಟçವನ್ನು ಪ್ರತಿನಿಧಿಸುವಂತಾಗಬೇಕು ಎಂದು ಸಲಹೆ ನೀಡಿದರು.
ಸಾರ್ವಜನಿಕ ಸಹಭಾಗಿತ್ವದಲ್ಲಿ ಸರ್ಕಾರಿ ಕಾರ್ಯಕ್ರಮಗಳು ನಡೆದರೆ ಅವು ಯಶಸ್ವಿಯಾಗಲು ಸಾಧ್ಯ. ಮುಂದಿನ ದಿನಗಳಲ್ಲಿ ಸರ್ಕಾರದಿಂದ ಕ್ರೀಡಾಕೂಟಗಳಿಗೆ ಹೆಚ್ಚಿನ ಅನುದಾನ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿz್ದೆÃನೆ ಎಂಬ ಕೀಳರಿಮೆ ಬಿಡಬೇಕು. ಮುರಾರ್ಜಿ ವಸತಿ ಶಾಲೆಯಲ್ಲಿ ಓದಿದ ವಿದ್ಯಾಥಿನಿಯೊಬ್ಬಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ ಎಂಬುದನ್ನು ಪ್ರತಿಯೊಬ್ಬರೂ ಅರಿಯಬೇಕು ಎಂದು ಹೇಳಿದರು.
ವಿದ್ಯಾರ್ಥಿನಿಯರಿಗೆ ಜಿಲ್ಲಾಧಿಕಾರಿ ಮೀನಾನಾಗರಾಜ್, ಜಿಪಂ ಸಿಇಓ ಎಚ್.ಎಸ್.ಕೀರ್ತನ ಮಾದರಿಯಾಗಬೇಕು. ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ, ಎಸ್‌ಪಿ ಡಾ. ವಿಕ್ರಮ ಅಮಟೆ ಅವರು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವುದು ಮಾದರಿಯಾಗಬೇಕು ಎಂದು ಕಿವಿಮಾತು ಹೇಳಿದರು.
ಶೋಷಿತರು ಮತ್ತು ಬಡ ಕುಟುಂಬದ ವಿದ್ಯಾರ್ಥಿಗಳ ಆರೋಗ್ಯ ಕಾಪಾಡುವುದು, ಶಿಕ್ಷಣ ನೀಡುವುದು ಸರ್ಕಾರ ಮತ್ತು ಜನಪ್ರತಿನಿಧಿಗಳ ಆದ್ಯ ಕರ್ತವ್ಯವಾಗಿದೆ. ಮುಂದಿನ ತಾಲೂಕು, ಜಿಲ್ಲಾಮಟ್ಟದ ಕ್ರೀಡಾಕೂಟ ನಡೆಸುವ ಸಂದರ್ಭದಲ್ಲಿ ಕ್ರೀಡಾಂಗಣ ಕೆಸರು ಆಗದ ರೀತಿ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಪಂ ಮಾಜಿ ಸದಸ್ಯೆ ಜೆಸಂತಾ ಅನಿಲ್‌ಕುಮಾರ್ ಮಾತನಾಡಿ, ಮಕ್ಕಳಲ್ಲಿ ಕಾಣುವ ಪ್ರೀತಿ ಎಲ್ಲೂ ಕಾಣಲು ಸಾಧ್ಯವಿಲ್ಲ. ನನಗೆ ಇದು ಅಪೂರ್ವವಾದ ಅವಕಾಶ. ಮುಂದೆ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾದರೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ ಮಾತನಾಡಿ, ಕ್ರೀಡೆ ಜೀವನದ ಅವಿಭಾಜ್ಯ ಅಂಗವಾಗಿದೆ. ಎಲ್ಲರೂ ಕ್ರೀಡಾ ಮನೋಭಾವದಿಂದ ಭಾಗವಹಿಸಿದಾಗ ಎಂತಹ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಮಹೇಶ್, ಕೃಷ್ಣಮೂರ್ತಿ ಅರಸು, ವೀರೇಶ್, ಜಾನಕಮ್ಮ, ಜಗದೀಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಪರಮೇಶ್, ಪ್ರಮುಖರಾದ ಶಿವಪ್ಪ, ಕುಮಾರ ಸ್ವಾಮಿ, ಅನಿಲ್ ಕುಮಾರ್, ಅಜ್ಜಯ್ಯ, ದಾವೂದ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನೀಲಕಂಠಪ್ಪ, ಮೂಡಲಗಿರಿಯಪ್ಪ ಮತ್ತಿತರರಿದ್ದರು.