ಕ್ರೀಡಾಕೂಟಗಳು ದೈಹಿಕ, ಮಾನಸಿಕ ಆರೋಗ್ಯಕ್ಕೆ ಸಹಕಾರಿ

1 ckm 2
ಚಿಕ್ಕಮಗಳೂರಿನ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ತಾಪಂ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಶಾಲಾ ಶಿಕ್ಷಣ ಇಲಾಖೆಯಡಿ ಸೋಮವಾರ ಉಪ್ಪಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಗರ ಕ್ಲಸ್ಟರ್‌ನ ಕಸಬಾ ವಲಯದ ಮಟ್ಟದ ಕ್ರೀಡಾಕೂಟದಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ ಕ್ರೀಡಾ ಜ್ಯೋತಿ ಸ್ವೀಕರಿಸಿದರು. ಅನ್ಸರ್ ಅಲಿ, ರುದ್ರಪ್ಪ, ಪರಮೇಶ್ವರಪ್ಪ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಕ್ರೀಡಾಕೂಟಗಳು ಮಕ್ಕಳಿಗೆ ದೈಹಿಕ, ಮಾನಸಿಕವಾಗಿ ಸದೃಢಗೊಳಿಸುವ ಜೊತೆಗೆ ಆರೋಗ್ಯಪೂರ್ಣ ಬದುಕಿಗೆ ದಾರಿ ಮಾಡಿಕೊಟ್ಟು ಜೀವನದಲ್ಲಿ ಶಿಸ್ತಿನ ಪಾಠವನ್ನು ಕಲಿಸುತ್ತದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು.

ನಗರದ ಜಿಲ್ಲಾ ಆಟದ ಮೈದಾನದಲ್ಲಿ ತಾಪಂ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಶಾಲಾ ಶಿಕ್ಷಣ ಇಲಾಖೆಯಡಿ ಸೋಮವಾರ ಉಪ್ಪಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಗರ ಕ್ಲಸ್ಟರ್‌ನ ಕಸಬಾ ವಲಯದ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ತೀರ್ಪುಗಾರರು ಕೂಡ ಪಾರದಶರ್ಕವಾಗಿ ತೀರ್ಪು ನೀಡಬೇಕು ಎಂದು ಸೂಚಿಸಿದರು.

ಯಾವುದೇ ಕ್ರೀಡೆಯಿರಲಿ ಸೋಲು ಮತ್ತು ಗೆಲುವು ಸಾಮಾನ್ಯವಾದ ವಿಚಾರ. ಗೆಲುವು ಸಾಧಿಸಿದವನು ಬಿಗದೇ, ಸೋತವರು ಕುಗ್ಗದೇ ಮುಂದಿನ ಗೆಲುವಿನ ಹೆಜ್ಜೆಗೆ ಈ ಸ್ಪರ್ಧೆಗಳು ನಾಂದಿಯಾಗಬೇಕು. ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲವಿದ್ದರೆ ಬದುಕಿನಲ್ಲಿ ಯಶಸ್ವಿಯಾಗಲು ಸಾದ್ಯ ಎಂದರು.

ಓದಿನ ಜೊತೆಗೆ ಕ್ರೀಡಾಚಟುವಟಿಕೆಗಳಲ್ಲಿ ತೊಡಗಲು ವಿದ್ಯಾರ್ಥಿಗಳು ಮುಂದಾಗಬೇಕು. ಅದರಂತೆ ಶಿಕ್ಷಕರು ಕೂಡಾ ವಿದ್ಯಾರ್ಥಿಗಳಿಗೆ ಆಸಕ್ತಿಯಿರುವ ಚಟುವಟಿಕೆಗಳಲ್ಲಿ ಹೆಚ್ಚಿನ ಪ್ರೋತ್ಸಾಹ ನೀಡಿದರೆ ಜಿಲ್ಲೆ, ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಸಾಧನೆ ಮಾಡಬಹುದು ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ ಮಾತನಾಡಿ, ಕಸಬಾ ವಲಯಮಟ್ಟದ ಕ್ರೀಡಾಕೂಟದಲ್ಲಿ ಸುಮಾರು ೧೫ ಕ್ಕೂ ಹೆಚ್ಚು ಶಾಲೆಗಳು ಸ್ಪರ್ಧೆಗಳಲ್ಲಿ ಭಾಗವಹಿಸಿವೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಆಟೋಟ ಹಾಗೂ ಪ್ರತಿಭೆ ಕೂಡಿಟ್ಟುಕೊಳ್ಳದೇ ಅನಾವರಣಗೊಳಿಸಬೇಕು. ಕ್ರೀಡೆಗಳಲ್ಲಿ ಹೆಚ್ಚಿನ ಶ್ರಮವಹಿಸಿದರೆ ಉನ್ನತ ಹೆಸರು ಸಂಪಾದಿಸಬಹುದು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಪ್ಪಳ್ಳಿ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಅಸೀಪ್‌ಪಾಷ, ಇಂದಿನ ಆಟೋಟ ಸ್ಪರ್ಧೆಗಳು ಸಂಪೂರ್ಣವಾಗಿ ವಿದ್ಯಾರ್ಥಿಗಳಿಗೆ ಮೀಸಲಾಗಿವೆ. ಭಯವನ್ನು ದೂರಗೊಳಿಸಿ ಧೈರ್ಯದಿಂದ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಶಕ್ತಿ ಪ್ರದರ್ಶಿಸಬೇಕು ಎಂದರು.

ತಾಲೂಕು ಗ್ಯಾರಂಟಿ ಪ್ರಾಧಿಕಾರ ಉಪಾಧ್ಯಕ್ಷ ಅನ್ಸರ್‌ಆಲಿ ಮಾತನಾಡಿ, ಕ್ರೀಡಾಪಟುಗಳು ಕ್ರೀಡಾ ಮನೋಭಾವದಿಂದ ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಸ್ಪರ್ಧೆಗಳಲ್ಲಿ ದ್ವೇಷ, ಅಸೂಯೆಗೆ ಆಸ್ಪದ ಕೊಡದೇ ಕ್ರೀಡಾಕೂಟದದಲ್ಲಿ ತಂಡದ ಗೆಲುವಿನತ್ತ ಚಿಂತನೆ ನಡೆಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಪರಮೇಶ್ವರಪ್ಪ, ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಜಯ್ಯ, ಕ್ಷೇತ್ರ ಶಿಕ್ಷಣ ಇಲಾಖೆ ಸಂಯೋಜಕರಾದ ಕೃಷ್ಣ ಮೂರ್ತಿ ಅರಸ್, ಜಾನಕಮ್ಮ, ಶಾಲೆಯ ಮುಖ್ಯ ಶಿಕ್ಷಕ ಸೋಮಶೆಖರ್, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಯ್ಯ ಮತ್ತತಿರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net