

ಅರಕಲಗೂಡು: ತಾಲೂಕಿನ ಬೈಚನಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಸರ್ಕಾರಿ ಪ್ರಾಥಮಿಕ ಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಜೋಡಿಗುಬ್ಬಿ ಕ್ರಾಸ್‌ನ ಬೇತೇಲ್ ವಿದ್ಯಾಸಂಸ್ಥೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.
ಕಬಡ್ಡಿ ಪಂದ್ಯಾವಳಿಯಲ್ಲಿ ಬಾಲಕ, ಬಾಲಕಿಯರ ವಿಭಾಗಗಳಲ್ಲಿ ಪ್ರಥಮ ಸ್ಥಾನ, ವಾಲಿಬಾಲ್ ಪಂದ್ಯದಲ್ಲಿ ಬಾಲಕರು ಪ್ರಥಮ ಹಾಗೂ ಬಾಲಕಿಯರು ದ್ವಿತೀಯ ಸ್ಥಾನ ಗಳಿಸಿದ್ದಾರೆ. ಖೋ ಖೋ ಬಾಲಕರು ದ್ವಿತೀಯ, ಥ್ರೋ ಬಾಲ್‌ನಲ್ಲಿ ಬಾಲಕಿಯರು ಪ್ರಥಮ ಸ್ಥಾನ, ಬಾಲಕರು ದ್ವಿತೀಯ ಸ್ಥಾನ ಪಡೆದಿದ್ದಾರೆ.
ವೈಯಕ್ತಿಕ ಸ್ಪರ್ಧೆಗಳಲ್ಲಿ ಬಾಲಕರ ವಿಭಾಗದಲ್ಲಿ ವರುಣ್‌ಗೌಡ ಚಾಂಪಿಯನ್‌ಶಿಪ್ ಹಾಗೂ ಬಾಲಕಿಯರ ವಿಭಾಗದಲ್ಲಿ ಬಿ.ಕೆ. ಕೀರ್ತನಾ ಚಾಂಪಿಯನ್‌ಶಿಪ್ ಪಡೆದಿದ್ದಾರೆ. 18 ಶಾಲೆಗಳು ಭಾಗವಹಿಸಿದ್ದ ಕ್ರೀಡಾಕೂಟದಲ್ಲಿ ಶಾಲೆಯ ಸಮಗ್ರ ಪ್ರಶಸ್ತಿಯನ್ನು ಗಳಿಸಿಕೊಂಡಿದೆ. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಸಂಸ್ಥೆಯ ಕಾರ್ಯದರ್ಶಿ ಸಂತೋಷ್‌ಕುಮಾರ್, ಮುಖ್ಯ ಶಿಕ್ಷಕಿ ಎ.ಮೇರಿ ಫಿಲೋಮಿನ ಇತರರು ಅಭಿನಂದಿಸಿದ್ದಾರೆ.