ಕ್ರೀಡೆ ಮಾನವ ಜೀವನದ ಒಂದು ಭಾಗ

Sports are a part of human life
ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶನಾಲಯ ಹಾಗೂ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನ ಹಾಗೂ ಹಾಕಿ ದಂತಕಥೆ ಮೇಜರ್ ಧ್ಯಾನ್‌ಚಂದ್‌ರ ಜನ್ಮ ದಿನಾಚರಣೆ ಹಿನ್ನೆಲೆ ಕುಲಪತಿ ಪ್ರೊ. ಬಿ.ಕೆ. ತುಳಸಿಮಾಲ ಪುಷ್ಪನಮನ ಸಲ್ಲಿಸಿದರು. ಗಂಗೂ ಜಿ. ಬಿರಾದಾರ, ಡಾ. ಹನುಮಂತಯ್ಯ ಪೂಜಾರಿ, ಡಾ. ಸಕ್ಪಾಲ್ ಹೂವಣ ಮತ್ತಿತರರಿದ್ದಾರೆ.
Published on

ವಿಜಯಪುರ: ಕ್ರೀಡೆಯು ಮಾನವ ಜೀವನದ ಒಂದು ಭಾಗವಾಗಿದೆ. ಶರೀರ ಮತ್ತು ಮನಸ್ಸು ಸದೃಢವಾಗಿರಬೇಕು. ದೈಹಿಕ ಸಾಮರ್ಥ್ಯ ಕಾಪಾಡಿಕೊಳ್ಳಲು ಮತ್ತು ಸ್ವಸ್ಥ ಸಮಾಜ ನಿರ್ವಹಣೆಗಾಗಿ ಪ್ರಾಥಮಿಕ ಹಂತದಿಂದ ವಿಶ್ವವಿದ್ಯಾನಿಲಯದವರೆಗಿನ ಕ್ರೀಡಾ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಗಂಗೂ ಜಿ. ಬಿರಾದಾರ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶನಾಲಯ ಹಾಗೂ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ವತಿಯಿಂದ ಮಂಗಳವಾರ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನ ಹಾಗೂ ಹಾಕಿ ದಂತಕಥೆ ಮೇಜರ್ ಧ್ಯಾನ್‌ಚಂದ್‌ರ ಜನ್ಮ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಪ್ರಯತ್ನವಾದಿಗಳಾಗಿ ಕ್ರೀಡೆಯನ್ನು ಅಳವಡಿಸಿಕೊಳ್ಳಬೇಕು, ಸಮಾಜಮುಖಿ ಕಾರ್ಯಗಳನ್ನು ನಿರ್ವಹಿಸಿ ಒಳ್ಳೆಯ ಕ್ರೀಡಾ ಮನೋಭಾವ ಹೊಂದಿರಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ. ಬಿ.ಕೆ. ತುಳಸಿಮಾಲ ಮಾತನಾಡಿ, ಕ್ರೀಡಾ ಉತ್ತೇಜನಕ್ಕಾಗಿ ವಿಶ್ವವಿದ್ಯಾನಿಲಯದ ಕ್ರೀಡಾ ನಿರ್ದೇಶನಾಲಯದ ಮತ್ತು ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದು, ಹೆಣ್ಣು ಮಕ್ಕಳು ಹೆಚ್ಚು ಸಮಾಜಮುಖಿ ಕಾರ್ಯಗಳನ್ನು ಮಾಡಬೇಕು ಎಂದರು.

ಕ್ರೀಡಾ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಹನುಮಂತಯ್ಯ ಪೂಜಾರಿ ಅವರು, ಧ್ಯಾನ್‌ಚಂದ್‌ರ ಜೀವನ ಸಾಧನೆ ಮತ್ತು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಮಹತ್ವದ ಕುರಿತು ವಿವರಿಸಿದರು.

ಕ್ರೀಡಾ ನಿರ್ದೇಶನಾಲಯದ ನಿರ್ದೇಶಕ ಮತ್ತು ದೈಹಿಕ ಶಿಕ್ಷಣ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಸಕ್ಪಾಲ್ ಹೂವಣ್ಣ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net