ಕ್ರೀಡೆ ಮಾನಸಿಕ, ದೈಹಿಕ ಸದೃಢತೆಗೆ ಸಹಕಾರಿ

IMG-20230719-WA0071
ಹಲಗೂರು ಹೋಬಳಿ ಮಟ್ಟದ ಕ್ರೀಡಾಕೂಟವನ್ನು ರವೀಶ್ ಗುಂಡು ಎಸೆಯುವ ಮೂಲಕ ಉದ್ಘಾಟಿಸಿದರು.
Published on

ಹಲಗೂರು: ಕ್ರೀಡಾಕೂಟಗಳಲ್ಲಿ ಎಲ್ಲ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಅವರಲ್ಲಿ ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಹೆಚ್ಚಲು ಸಹಕಾರಿಯಾಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರ ಪಾಟೀಲ್ ತಿಳಿಸಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಹೋಬಳಿ ಮಟ್ಟದ 2023-24ನೇ ಸಾಲಿನ ಕ್ರೀಡಾಕೂಟದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಶಾಲೆಗಳಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡುವುದರ ಜತೆಗೆ ಕ್ರೀಡೆಗೂ ಸಹ ನೀಡಬೇಕು. ಕ್ರೀಡೆ ವಿದ್ಯಾರ್ಥಿಗಳ ಮಾನಸಿಕ ದೈಹಿಕ ಆರೋಗ್ಯಕ್ಕೆ ಅವಶ್ಯಕ. ಹಿಂದೆ ಕ್ರೀಡೆಗಳನ್ನು ಮನರಂಜನೆಗಾಗಿ ಆಯೋಜಿಸಲಾಗುತ್ತಿತ್ತು. ಈಗ ಆರೋಗ್ಯಕ್ಕಾಗಿ ಕ್ರೀಡೆ ಮುಖ್ಯವಾಗಿದೆ. ಕ್ರೀಡೆಯನ್ನು ದೈಹಿಕ ಶಿಕ್ಷಣ ಎನ್ನುವುದರ ಬದಲು ಆರೋಗ್ಯ ಶಿಕ್ಷಣ ಎಂದು ಬದಲಾಯಿಸಬೇಕು ಎಂದು ಅಭಿಪ್ರಾಯಪಟ್ಟರು.

ಹಲಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಕಾರ್ಯಕ್ರಮ ಉದ್ಘಾಟಿಸಿದರು. ಎಸ್‌ಡಿಎಂಸಿ ಸದಸ್ಯ ರವೀಶ್ ಗುಂಡು ಎಸೆಯುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಮುಖಂಡರಾದ ಎ.ಎಸ್.ದೇವರಾಜು, ಪುಟ್ಟಸ್ವಾಮಿ, ಮಲ್ಲಿಕಾರ್ಜುನ, ನಾಗೇಶ, ರವೀಂದ್ರ, ವೀರಣ್ಣೇಗೌಡ, ರವಿಕುಮಾರ್ ಮತ್ತು ಜಿ.ಎಸ್.ಕೃಷ್ಣ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net