ಕ್ರೀಡೆಗಳಲ್ಲಿ ಆಸಕ್ತಿಯಿಂದ ಪಾಲ್ಗೊಳ್ಳಿ

8 vikram 1
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಆಟೋಟಗಳು ಮಕ್ಕಳ ದೇಹ ಮನಸ್ಸನ್ನು ಉಲ್ಲಾಸಗೊಳಿಸುತ್ತವೆ. ಹೀಗಾಗಿ ಮಕ್ಕಳು ಪಠ್ಯದೊಂದಿಗೆ ಕ್ರೀಡೆಗಳಲ್ಲಿ ಲವಲವಿಕೆಯಿಂದ ಭಾಗವಹಿಸಿ ಆರೋಗ್ಯಪೂರ್ಣ ಜೀವನ ರೂಪಿಸಿಕೊಳ್ಳಬೇಕು ಎಂದು ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕಕುಮಾರ ಸಿಂದಗಿ ಹೇಳಿದರು.
ನಗರದ ಮಾಳಮಡ್ಡಿ ಕೆ.ಇ. ಬೋರ್ಡ್ ಪ್ರೌಢ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ, ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಕೆ.ಇ.ಬೋರ್ಡ ಪ್ರೌಢಶಾಲೆ ಆಶ್ರಯದಲ್ಲಿ ಮಂಗಳವಾರ ಏರ್ಪಡಿಸಿದ್ದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸೋಲು ಗೆಲುವು ಮುಖ್ಯವಲ್ಲ. ಕ್ರೀಡೆಗಳಲ್ಲಿ ಭಾಗವಹಿಸುವ ಮನೋಭಾವ ಮುಖ್ಯ. ಯಾವುದೇ ಆಟಗಳಲ್ಲಿ ಪ್ರಯತ್ನವೇ ಯಶಸ್ಸಿನ ಹಾದಿಯಾಗಿದೆ. ಕ್ರೀಡಾಪಟುಗಳು ಸತತ ಪ್ರಯತ್ನ ಪರಿಶ್ರಮದಿಂದ ಗುರಿ ಮುಟ್ಟಲು ಸಾಧ್ಯ. ಕ್ರೀಡಾ ಚಟುವಟಿಕೆಗಳು ಮಕ್ಕಳ ಸರ್ವಾಂಗೀಣ ವಿಕಾಸದ ಸಾಧನಗಳಾಗಿವೆ. ಹೀಗಾಗಿ ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸಿ ಚೈತನ್ಯದಿಂದ ಇರಬೇಕು ಎಂದರು.
ಕ್ಷೇತ್ರ ಸಮನ್ವಯ ಅಧಿಕಾರಿ ಮಂಜುನಾಥ ಅಡಿವೇರ ಮಾತನಾಡಿದರು. ಉಪಪ್ರಾಂಶುಪಾಲ ಎನ್.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net