ಕ್ರೀಡೆಯಲ್ಲಿ ಉತ್ತಮ ಸಾಧನೆ

deeraj irkal
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ ವಲಯ ಮತ್ತು ತಾಲೂಕು ಮಟ್ಟದ ಅಂತರ್ ಶಾಲಾ ಕ್ರೀಡಾಕೂಟದಲ್ಲಿ ನಗರದ ರೋಟರಿ ಸರಸ್ವತಿ ವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ಧೀರಜ್ ಇರಕಲ್ ಎತ್ತರ ಜಿಗಿತದಲ್ಲಿ ವಲಯ ಹಾಗೂ ತಾಲೂಕು ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ವಲಯ ಮಟ್ಟದಲ್ಲಿ ಶ್ರೀನಿಧಿ ಚವಟೆ ಯೋಗ ಸ್ಪರ್ಧೆಯಲ್ಲಿ ಪ್ರಥಮ, ಗುರುಕುಮಾರ ಹಿರೇಮಠ 1500 ಮೀ. ಹಾಗೂ 3000 ಮೀ. ಓಟದ ಸ್ಪರ್ಧೆಯಲ್ಲಿ ಪ್ರಥಮ, ಆಂಜನೇಯ ಎತ್ತರ ಜಿಗಿತದಲ್ಲಿ ದ್ವಿತೀಯ, ಭೂಮಿಕಾ ಉಗರಗೋಳ 100 ಮೀ. ಓಟದಲ್ಲಿ ದ್ವಿತೀಯ ಹಾಗೂ ಅಭಿಷೇಕಯ್ಯ ಹಿರೇಮಠ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಅಧ್ಯಕ್ಷ ಲಿಂಗರಾಜ ಪಾಟೀಲ ಹಾಗೂ ಪ್ರಾಚಾರ್ಯು ಕೀರ್ತಿ ದೇಶಪಾಂಡೆ ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net