ಕ್ರೀಡೆಯಲ್ಲಿ ಉನ್ನತ ಸಾಧನೆ ಮಾಡಿ

26ark-1
Published on

ಅರಕಲಗೂಡು: ಭಾರತೀಯ ಸಂಸ್ಕೃತಿಯಲ್ಲಿ ಕ್ರೀಡೆಗೆ ಮಹತ್ವದ ಸ್ಥಾನವಿದ್ದು ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಿ ಕೀರ್ತಿ ಹೆಚ್ಚಿಸಬೇಕು ಎಂದು ಹಾಸನ ಆದಿಚುಂಚನಗಿರಿ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಹೇಳಿದರು.

ಪಟ್ಟಣ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ಮಕ್ಕಳು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಲು ಅನುಕೂಲವಾಗುವಂತೆ ಹಿಂದಿನಿಂದಲೂ ಸಮಯ ಮೀಸಲಿಡಲಾಗುತ್ತಿತ್ತು. ಇದರಿಂದ ಕ್ರೀಡೆಯಲ್ಲಿ ಸಾಧನೆ ಮಾಡುವ ಜತೆಗೆ ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯ ವೃದ್ಧಿಸಿಕೊಳ್ಳಲು ಸಹಕಾರಿಯಾಗಿದೆ. ಇಂದಿನ ಆಧುನಿಕತೆ ಭರಾಟೆಯಲ್ಲಿ ದೇಸಿ ಕ್ರೀಡೆಗಳನ್ನು ಉಳಿಸುವುದು ಅತ್ಯಗತ್ಯವಾಗಿದೆ ಎಂದರು.

ತಹಸೀಲ್ದಾರ್ ಕೆ.ಆರ್.ಶ್ರೀನಿವಾಸ್ ಕ್ರೀಡಾ ಜ್ಯೋತಿ ಸ್ವೀಕರಿಸಿದರು. ಸಬ್ ಇನ್ಸ್‌ಪೆಕ್ಟರ್ ಧನರಾಜ್, ಪ್ರಾಂಶುಪಾಲರಾದ ಮಹೇಶ್ ಹೊಡೆನೂರು, ಕುಮಾರಯ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net