ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ

14.npk-1
Published on

ನಾಪೋಕ್ಲು: ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಪ್ರಾಮಾಣಿಕವಾಗಿ ಭಾಗವಹಿಸುವುದೇ ಮುಖ್ಯ ಎಂದು ಹೈಕೋರ್ಟ್ ವಕೀಲ ಅಜ್ಜಿಕುಟ್ಟಿರ ಪೊನ್ನಣ್ಣ ಹೇಳಿದರು.


ಇಲ್ಲಿನ ಶ್ರೀರಾಮ ಟ್ರಸ್ಟ್ ವಿದ್ಯಾಸಂಸ್ಥೆ ವತಿಯಿಂದ ಸಮೀಪದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಅಂತರ ಪ್ರೌಢಶಾಲಾ ಹಾಕಿ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.


ಮಕ್ಕಳಿಗೆ ಈ ರೀತಿಯ ಕ್ರೀಡಾಕೂಟಗಳನ್ನು ಆಯೋಜಿಸುವುದರಿಂದ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ವೃದ್ಧಿಯಾಗುವುದರ ಜತೆಗೆ, ಸಹಬಾಳ್ವೆಗೆ ಪೂರಕವಾಗುತ್ತದೆ. ಇಂತಹ ಕ್ರೀಡಾಕೂಟಗಳ ಮೂಲಕ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ನಮ್ಮ ಜಿಲ್ಲೆಯಿಂದ ಸಜ್ಜುಗೊಳಿಸಲು ನಾವೆಲ್ಲರೂ ಪ್ರೋತ್ಸಾಹಿಸಬೇಕು. ಇಂತಹ ಕಾರ್ಯಕ್ರಮಕ್ಕೆ ನನ್ನ ಸಹಕಾರ ಸದಾ ಇದೆ ಎಂದರು.
ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಇಸ್ಮಾಯಿಲ್ ಮಾತನಾಡಿದರು.

ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ.ಬೊಪ್ಪಂಡ ಜಾಲಿ ಬೋಪಯ್ಯ ಅಧ್ಯಕ್ಷತೆ ವಹಿಸಿದ್ದರು. ಜಯ ಕಾಫಿ ವರ್ಕ್ಸ್ ಮಾಲೀಕ, ಬೆಳೆಗಾರ ಮಂಡಿರ ಜಯ ದೇವಯ್ಯ, ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ, ನಿರ್ದೇಶಕರಾದ ಪ್ರೊ. ಕಲ್ಯಾಟಂಡ ಪೂಣಚ್ಚ, ಅಪ್ಪಾರಂಡ ಅಪ್ಪಯ್ಯ, ಬೊಪ್ಪಂಡ ಕುಶಾಲಪ್ಪ, ಮಕ್ಕಿ ಸುಬ್ರಹ್ಮಣ್ಯ ಭಟ್, ಕೊಂಬಂಡ ಗಣೇಶ್, ಬೊಳ್ಳಚೆಟ್ಟಿರ ಸುರೇಶ್, ನಾಯಕಂಡ ದೀಪು ಚಂಗಪ್ಪ , ಅಪ್ಪಚೆಟ್ಟೋಳಂಡ ನವೀನ್, ಪ್ರಾಂಶುಪಾಲೆ ಶಾರದಾ ಅಪ್ಪಣ್ಣ, ವಿವಿಧ ಶಾಲಾ ಶಿಕ್ಷಕರು, ಸಿಬ್ಬಂದಿ ವರ್ಗ, ಪೋಷಕರು ಸಾರ್ವಜನಿಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net