

ಚಾಮರಾಜನಗರ: ಕ್ರೀಡೆಯಲ್ಲಿ ಸೋಲು, ಗೆಲುವು ಸಾಮಾನ್ಯ. ಆದ್ದರಿಂದ ಪ್ರತಿಯೊಬ್ಬರೂ ಆಟದಲ್ಲಿ ಪಾಲ್ಗೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ಸಲಹೆ ನೀಡಿದರು.
ಹನೂರು ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಶುಕ್ರವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಆಯೋಜಿಸಿದ್ದ ಪ್ರೌಢಶಾಲಾ ವಿದ್ಯಾರ್ಥಿಗಳ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಕ್ರೀಡೆಯು ಮನುಷ್ಯನ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಆದ್ದರಿಂದ, ಪ್ರತಿಯೊಬ್ಬರೂ ಶಾಲಾ ಹಂತದಲ್ಲೇ ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪ್ರೌಢಶಾಲೆ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಅಮಲದಾಸ್, ದೈಹಿಕ ಶಿಕ್ಷಣ ಪರಿವೀಕ್ಷಕ ಮಹದೇವ, ಶಿಕ್ಷಣ ಸಂಯೋಜಕ ಕಂದವೇಲು, ವಿವಿಧ ಶಾಲೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಇದ್ದರು.