ಕ್ರೀಡೆಯಿಂದ ಉತ್ಸಾಹ ಜೀವನ ಸಾಧ್ಯ

bkt-12-4
ಬಾಗಲಕೋಟೆ ನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಗುರುವಾರ ಜಿಲ್ಲಾ ಮಟ್ಟದ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಉದ್ಘಾಟಿಸಿದರು. ಅಽಕಾರಿಗಳಾದ ಕೆ.ಮಹಾಂತೇಶ, ಸಿದ್ದಲಿಂಗಪ್ಪ ಗೋಳದ ಸೇರಿದಂತೆ ಇತರರು ಉಪಸ್ಥಿತರಿದ್ದರು.
Published on

ಬಾಗಲಕೋಟೆ: ಪ್ರತಿಯೊಬ್ಬ ಮನುಷ್ಯನ ಶರೀರಕ್ಕೆ ಮಾತ್ರ ಮುಪ್ಪಾವಸ್ಥೆ ಬರುತ್ತದೆ. ಆದರೆ ಮನಸ್ಸಿಗೆ ಅಲ್ಲ. ಇದನ್ನರಿತು ಕ್ರೀಡೆಯಲ್ಲಿ ಭಾಗವಹಿಸುವದರಿಂದ ಉತ್ಸಾಹ ಜೀವನ ಸಾಗಿಸಲು ಸಾಧ್ಯವಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಹೇಳಿದರು.

ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ನಾಗರಿಕರಿಗೆ ಹಮ್ಮಿಕೊಂಡ ಜಿಲ್ಲಾ ಮಟ್ಟದ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜನ ಕಲ್ಯಾಣ ಹಾಗೂ ಆರೋಗ್ಯ ವೃದ್ಧಿಗಾಗಿ ಸರ್ಕಾರ ಆದೇಶದ ಮೇರೆಗೆ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಹಿರಿಯರಾಗಲಿ, ಕಿರಿಯರಾಗಲಿ ಕ್ರೀಡೆಯಲ್ಲಿ ಭಾಗವಹಿಸಿ ದೀರ್ಘಾಯುಶಿಗಳಾಗಿ ಆರೋಗ್ಯವಂತ ಜೀವನ ನಡೆಸಬೇಕು. ಇಂದು ಹಿರಿಯರಿಗೆ ಕ್ರೀಡೆ ಅವಶ್ಯವಾಗಿದ್ದು, ಮನೆಯಲ್ಲಿಯ ಗ್ರಾಮಗಳಲ್ಲಿಯ, ಕಚೇರಿಗಳಲ್ಲಿ ಕಾರ್ಯನಿರ್ವಹಿಸಿ ಒತ್ತಡದ ಜೀವನ ನಿರಾವರಣೆಗೆ ಕ್ರೀಡೆ ಅವಶ್ಯವಾಗಿದ್ದು, ಕಿರಿಯರಲ್ಲದೇ ಹಿರಿಯರಿಗಾಗಿಯೇ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಕ್ರೀಡೆಯಿಂದ ದೈಹಿಕ, ಮಾನಸಿಕ ಹಾಗೂ ಸಾಮಾಜಿಕವಾಗಿ ಮುಂದೆ ಬರಲು ಸಾಧ್ಯವಾಗಲಿದ್ದು, ಹಿರಿಯರೆಂಬ ಸಂಕುಚಿತ ಭಾವನೆ ಹೊರಗಿಟ್ಟು ಎಲ್ಲರೂ ಮುಕ್ತವಾಗಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ತಿಳಿಸಿದರು.

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಽಕಾರಿ ಕೆ.ಮಹಾಂತೇಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ನಿರೂಪಣಾಽಕಾರಿ ಸಿದ್ದಲಿಂಗಪ್ಪ ಗೋಳದ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net