

ಚನ್ನರಾಯಪಟ್ಟಣ: ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಸದೃಢ ದೇಹ ಹಾಗೂ ಕ್ರಿಯಾಶೀಲತೆ ಹೊಂದಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್.ದೀಪಾ ತಿಳಿಸಿದರು.
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಮೇಗಲಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಂಯುಕ್ತಾಶ್ರಯದಲ್ಲಿ ಕಸಬಾ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.
ಶಾಲೆಯಲ್ಲಿ ಮಕ್ಕಳು ವಿದ್ಯಾಭ್ಯಾಸದೊಂದಿಗೆ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು. ದೇಹವು ಸದೃಢವಾಗಿದ್ದರೆ ಮನಸ್ಸು ಪ್ರಬುದ್ಧವಾಗಿರುತ್ತದೆ. ಮಕ್ಕಳು ಶಿಕ್ಷಣದೊಂದಿಗೆ ಕ್ರೀಡೆಗಳಲ್ಲಿಯೂ ಪಾಲ್ಗೊಳ್ಳುವುದರೊಂದಿಗೆ ಶಾಲೆಗೆ ಕೀರ್ತಿ ತರಬಹುದು. ಕ್ರೀಡೆ ಎಂದ ಮೇಲೆ ಸೋಲು, ಗೆಲುವು ಸಾಮಾನ್ಯ. ಇದರಲ್ಲಿ ಭಾಗವಹಿಸುವಿಕೆ ಮುಖ್ಯ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಪುರಸಭೆ ಸದಸ್ಯ ನವೀನ್ ಧ್ವಜಾರೋಹಣ ನೆರವೇರಿಸಿದರು. ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸಿ.ಎನ್.ವೆಂಕಟೇಶ್, ನಗರ ಯೋಜನೆ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಣತಿ ಆನಂದ್, ಪುರಸಭೆ ಸದಸ್ಯೆ ರಾಣಿಕೃಷ್ಣ, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸಿದ್ದರಾಜು, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಮಹದೇವ್, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕೆ.ಎನ್.ಅನಿಲ್, ಸಹಾಯಕ ನಿರ್ದೇಶಕ ಚೆಲುವನಾರಾಯಣಸ್ವಾಮಿ, ಸರ್ಕಾರಿ ನೌಕರರ ಸಂಘದ ನಿರ್ದೇಶಕ ವಿ.ಜಿ.ದ್ಯಾವೇಗೌಡ, ಕ್ರೀಡಾಕೂಟದ ಗೌರವಾಧ್ಯಕ್ಷ ಶಿವಣ್ಣ, ಅಧ್ಯಕ್ಷ ದೇವರಾಜೇಗೌಡ , ಕಾರ್ಯದರ್ಶಿ ರಂಗೇಗೌಡ, ಸಂಘಟನಾ ಕಾರ್ಯದರ್ಶಿ ಕೆ.ಎ.ಪ್ರಕಾಶ್, ಖಜಾಂಚಿ ನಾಗೇಂದ್ರ ಕುಮಾರ್ ಇದ್ದರು.