ಕ್ರೂಸರ್-ಲಾರಿ ಡಿಕ್ಕಿ, ವೃದ್ಧೆ ಸಾವು

4ATN2
ಅಥಣಿ ತಾಲೂಕಿನ ಘಟನಟ್ಟಿ ಕ್ರಾಸ್‌ನಲ್ಲಿ ಕ್ರೂಸರ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿರುವುದು.
Published on

ಅಥಣಿ ಗ್ರಾಮೀಣ: ಅಥಣಿ ತಾಲೂಕಿನ ಘಟನಟ್ಟಿ ಕ್ರಾಸ್‌ನಲ್ಲಿ ಶನಿವಾರ ಕ್ರೂಸರ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿ ವೃದ್ಧೆ ಮೃತಪಟ್ಟಿದ್ದಾರೆ 10 ಜನ ಗಂಂಭೀರ ಗಾಯಗೊಂಡಿದ್ದು, 6 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಯರಗಲ್ಲ ಗ್ರಾಮದ ದೇವಕಿ ನಿಂಗಣ್ಣ ಕಿಚಡಿ (65) ಮೃತ ವೃದ್ಧೆ. ಕ್ರೂಸರ್‌ನಲ್ಲಿ ಇಬ್ಬರು ಚಿಕ್ಕ ಮಕ್ಕಳು ಸೇರಿ ಒಟ್ಟು 16 ಜನರಾಯಬಾಗ ತಾಲೂಕಿನ ಚಿಂಚಲಿ ಮಾಯಕ್ಕಾದೇವಿ ದರ್ಶನ ಪಡೆದು ಮರಳಿ ಕೊಕಟನೂರ ರೇಣುಕಾ ಯಲ್ಲಮ್ಮದೇವಿ ದರ್ಶನ ಪಡೆಯಲು ತೆರಳುವಾಗ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಅಥಣಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಅಲ್ಲಿಂದ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾರಿ ಸಮೇತ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net