ಕ್ರೈಂ ಪಿಎಸ್‌ಐ ಅಕಾಲಿಕ ಸಾವು

Untimely death of crime psi
ಹಣಮಂತ ಸುತಗುಂಡರ
Published on

ಮುದ್ದೇಬಿಹಾಳ: ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಅಪರಾಧ ವಿಭಾಗದ ಪಿಎಸ್‌ಐ ಆಗಿ ಸೇವೆ ಸಲ್ಲಿಸುತ್ತಿದ್ದ ತಾಲೂಕಿನ ಢವಳಗಿ ಗ್ರಾಮದ ಹಣಮಂತ ಬಸಪ್ಪ ಸುತಗುಂಡರ (45) ಮಂಗಳವಾರ ಅನಾರೋಗ್ಯದಿಂದ ನಿಧನ ಹೊಂದಿದರು.
ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಇದ್ದಾರೆ. ಮುದ್ದೇಬಿಹಾಳ, ನಿಡಗುಂದಿ, ತಾಳಿಕೋಟೆ ಸೇರಿದಂತೆ ಹಲವು ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದರು. ಕಳೆದ ಎರಡು ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಮೃತರ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ ಸ್ವಗ್ರಾಮ ಢವಳಗಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net