

ಹಾಸನ: ವಿದ್ಯಾನಗರದ ಕ್ರೈಸ್ಟ್ ಶಾಲೆಯಲ್ಲಿ ಶುಕ್ರವಾರ ಕನ್ನಡ ರಾಜ್ಯೋತ್ಸವದ ಅಂಗವಾಗಿ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ಸಾಹಿತಿ ಸುಮಾ ರಮೇಶ್ ರವರು ಭಾಗವಹಿಸಿ, ವಿದ್ಯಾರ್ಥಿ ದೆಸೆಯಲ್ಲಿ ನಾವು ಕನ್ನಡತನವನ್ನು ಬೆಳೆಸಿಕೊಳ್ಳಬೇಕು. ಅನ್ಯ ಭಾಷೆಗಳನ್ನು ಕಲಿಯುವುದರ ಜತೆಗೆ ನಮ್ಮ ನಾಡು ನುಡಿಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು.ಎಂದು ಹಿತನುಡಿಗಳನ್ನಾಡಿದರು.
ಶಾಲೆಯ ಪ್ರಾಂಶುಪಾಲ ರೆವರೆಂಡ್ ಫಾದರ್ ಅನುಮೋನ್ ಜೋಸೆಫ್ ಮಾತನಾಡಿ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಪಂಪ, ರನ್ನ, ಪೊನ್ನ, ಜನ್ನ ಕವಿಯಾದಿಗಳಾಗಿ ಅನೇಕ ಸಾಹಿತಿಗಳು ಭಾಷಾ ಬೆಳವಣಿಗೆಗೆ ತಮ್ಮದೆ ಆದ ಕೊಡುಗೆಯನ್ನು ನೀಡಿದ್ದಾರೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಕನ್ನಡ ನಾಡು, ನುಡಿಯ ಬೆಳವಣಿಗೆಗಾಗಿ ಶ್ರಮಿಸೋಣ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.