ಕ್ಲಬ್ ಬೇಸ್‌ಬಾಲ್ ಪಂದ್ಯಾವಳಿಗೆ ಸಂಸದ ಚಾಲನೆ

11
Published on

ಮೈಸೂರು: ನಗರದಲ್ಲಿ ಮೊದಲ ಬಾರಿಗೆ ಆಯೋಜಿಸಿರುವ ರಾಜ್ಯ ಮಟ್ಟದ ಮೂರು ದಿನಗಳ ಕ್ಲಬ್ ಬೇಸ್‌ಬಾಲ್ ಪಂದ್ಯಾವಳಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶುಕ್ರವಾರ ಚಾಲನೆ ನೀಡಿದರು.

ಮೈಸೂರು ಜಿಲ್ಲಾ ಬೇಸ್‌ಬಾಲ್ ಅಸೋಸಿಯೇಷನ್(ಎಂಡಿಬಿಎ) ಮತ್ತು ಬೇಸ್‌ಬಾಲ್ ಅಸೋಸಿಯೇಷನ್ ಆಫ್ ಕರ್ನಾಟಕ(ಬಿಎಕೆ) ಸಹಯೋಗದಲ್ಲಿ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಬೇಸ್‌ಬಾಲ್ ಪಂದ್ಯಾವಳಿ ಆಯೋಜಿಸಲಾಗಿದೆ. ಪಂದ್ಯಾವಳಿಯಲ್ಲಿ ಮೈಸೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ 16 ತಂಡಗಳು ಭಾಗವಹಿಸಿವೆ.

ಪಂದ್ಯಾವಳಿ ಉದ್ಘಾಟನೆ ಸಂದರ್ಭದಲ್ಲಿ ಮಾಜಿ ಸಚಿವ ಸಾ.ರಾ.ಮಹೇಶ್, ಎಂಎಲ್‌ಸಿ ಸಿ.ಎನ್.ಮಂಜೇಗೌಡ, ಕರ್ನಾಟಕ ಮತದಾರರ ಜಾಗೃತಿ ವೇದಿಕೆ ಅಧ್ಯಕ್ಷ ಎಂ.ಜೆ.ಸುರೇಶ್‌ಗೌಡ, ಪುಣ್ಯಕೋಟಿ ಸೇವಾ ಟ್ರಸ್ಟ್ ಅಧ್ಯಕ್ಷ ಹನುಮಂತೇಶ್, ದೈಹಿಕ ಶಿಕ್ಷಣ ಮಾಜಿ ನಿರ್ದೇಶಕ ಶಂಕರ್ ನಾರಾಯಣ, ವಕೀಲ ಡಾ.ಶಿವಣ್ಣಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net