ಕ್ಲಿಯರ್‌ಮೆಡಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ

c7567c37-9179-4704-8daa-f49f55c7096d
Published on

ಮೈಸೂರು: ಕ್ಲಿಯರ್‌ಮೆಡಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡ ಉದ್ಘಾಟನಾ ಸಮಾರಂಭವನ್ನು ಜು.21ರಂದು ಬೆಳಗ್ಗೆ 10.30ಕ್ಕೆ ಹಿನಕಲ್‌ನ ಪ್ರಗತಿ ಕಣ್ಣಿನ ಆಸ್ಪತ್ರೆ ಆವರಣದಲ್ಲಿ ಆಯೋಜಿಸಲಾಗಿದೆ.


ಹಿನಕಲ್ ಗ್ರಾಪಂ ವ್ಯಾಪ್ತಿಯ ಹುಣಸೂರು ರಸ್ತೆ ಸಮೀಪದಲ್ಲಿ ನೂತನ ಕ್ಲಿಯರ್‌ಮೆಡಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಆರಂಭವಾಗಲಿದ್ದು, ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ನೂತನ ಆಸ್ಪತ್ರೆ ಕಟ್ಟಡವನ್ನು ಉದ್ಘಾಟಿಸುವರು. ಶಾಸಕ ಜಿ.ಟಿ.ದೇವೇಗೌಡ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಪಿ.ಸಿ.ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ ಎಂದು ಆಸ್ಪತ್ರೆಯ ಮುಖ್ಯ ವ್ಯವಸ್ಥಾಪಕ ಎ.ಆರ್.ಮಂಜುನಾಥ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ಸದ್ಯ ವಿಜಯನಗರ 3ನೇ ಹಂತದ ಕ್ಲಿಯರ್‌ಮೆಡಿ ರೇಡಿಯಂಟ್ ಆಸ್ಪತ್ರೆ 5 ವರ್ಷಗಳಿಂದ ಸಾವಿರಾರು ಜನರಿಗೆ ಕ್ಯಾನ್ಸರ್, ಕಿಡ್ನಿ, ಗ್ಯಾಸ್ಟ್ರೊ, ಪಲ್ಮನಾಲಜಿ, ಡಯಾಲಿಸಿಸ್, ನ್ಯೂರೊ ಸರ್ಜರಿ, ಇಎನ್‌ಟಿ, ಆರ್ಥೊ, ಜನರಲ್ ಮೆಡಿಸಿನ್ ಸೇರಿದಂತೆ ಎಲ್ಲ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡಿದೆ.

ಅದರಲ್ಲೂ ಕ್ಯಾನ್ಸರ್‌ನಿಂದ ಬಳಲುವ ಮೊದಲ ಹಂತದ ಹಲವು ರೋಗಿಗಳು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ನಂತರದ ಹಂತದಲ್ಲಿರುವ ಕ್ಯಾನ್ಸರ್ ರೋಗಿಗಳಿಗೆ ಸುಧಾರಿತ ಚಿಕಿತ್ಸೆ ನೀಡಿ ಹೆಚ್ಚು ಅವಧಿವರೆಗೆ ಬದುಕುಳಿಯುವಂತೆ ಮಾಡಲಾಗಿದೆ. ಈ ಸೇವೆಯು ಮತ್ತಷ್ಟು ಜನರಿಗೆ ತಲುಪುವಂತೆ ಮಾಡುವ ನಿಟ್ಟಿನಲ್ಲಿ ಹಿನಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರುವ ಹುಣಸೂರು ರಸ್ತೆ ಸಮೀಪದಲ್ಲಿ ಆಸ್ಪತ್ರೆಯನ್ನು ತೆರೆಯಲಾಗುತ್ತಿದೆ. ಹಾಲಿ ಇರುವ ಕ್ಲಿಯರ್‌ಮೆಡಿ ರೇಡಿಯಂಟ್ ಆಸ್ಪತ್ರೆಗೆ ಪೂರಕವಾಗಿ ಇದು ಕೆಲಸ ಮಾಡುತ್ತದೆ ಎಂದು ಹೇಳಿದರು.


ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ರಾಕೇಶ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net