ಕ್ವಾರಂಟೈನ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ

11-hvr-01
Published on

ಹಾವೇರಿ: ಶಿಗ್ಗಾಂವಿ ತಾಲೂಕು ಕೋವಿಡ್ ಆಸ್ಪತ್ರೆ ಹಾಗೂ ಸಾಂಸ್ಥಿಕ ಕ್ವಾರಂಟೈನ್ ಸೆಂಟರ್​ಗಳ ಸೌಲಭ್ಯ ಹೆಚ್ಚಳ ಕುರಿತು ಜಿಲ್ಲಾಧಿಕಾರಿ ಕೃಷ್ಣ ಬಾಜಪೈ ಶುಕ್ರವಾರ ಸಂಜೆ ಶಿಗ್ಗಾಂವಿ ತಾಲೂಕಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿಗ್ಗಾಂವಿ ತಾಲೂಕು ಆಸ್ಪತ್ರೆ, ಜಕ್ಕಿನಕಟ್ಟಿ ಹಾಗೂ ಬಾಡ ವಸತಿ ಶಾಲೆಗಳಿಗೆ ಭೇಟಿ ನೀಡಿ, 100 ಹಾಸಿಗೆಯ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ ಹಾಗೂ ಕ್ವಾರಂಟೈನ್ ಸೆಂಟರ್​ಗಳ ಸಿದ್ಧತೆಗೆ ಅಗತ್ಯ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದರು.

ಸವಣೂರ ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ಡಿಎಚ್​ಒ ಡಾ. ರಾಜೇಂದ್ರ ದೊಡ್ಡಮನಿ, ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕಿ ಬಿ.ಸಿ. ಚೈತ್ರಾ, ತಹಸೀಲ್ದಾರ್ ಪ್ರಕಾಶ ಕುದರಿ, ನಿರ್ವಿುತಿ ಕೇಂದ್ರದ ಯೋಜನಾ ನಿರ್ದೇಶಕ ತಿಮ್ಮೇಶಕುಮಾರ ಸೇರಿ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net