ಕ್ವಾರಂಟೈನ್ ಕೇಂದ್ರಗಳಿಗೆ ಸಿದ್ಧತೆ ಮಾಡಿಕೊಳ್ಳಿ : ಕೃಷ್ಣಾರೆಡ್ಡಿ ಸೂಚನೆ

13cmy4
Published on

ಚಿಂತಾಮಣಿ : ನಗರದಲ್ಲಿ ಒಂದೇ ಕುಟುಂಬದ ಮೂರು ಮಂದಿಗೆ ಕರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಬುಧವಾರ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.

ನಗರದಲ್ಲಿರುವ ಕ್ವಾರಂಟೈನ್‌ನಲ್ಲಿ ಮೂಲ ಸೌಲಭ್ಯಗಳು ಇಲ್ಲದಿರುವ ಬಗ್ಗೆ ಟೀಕೆ ಟಿಪ್ಪಣೆಗಳು ಬರುತ್ತಿರುವ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಶಾಸಕರು ಸಮಸ್ಯೆ ನಿವಾರಣೆಯ ಜತೆಗೆ 500 ಮಂದಿ ಕ್ವಾರಂಟೈನ್ ಮಾಡಲು ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದರು.

ನಗರದಲ್ಲಿ ಸಾಮಾಜಿಕ ಅಂತರ ಕಾಪಾಡದ ಅಂಗಡಿಯವವ ಮೇಲೆ ಮತ್ತು ಮಾಸ್ಕ್ ಹಾಕಿಕೊಳ್ಳದೆ ಓಡಾಡುವವರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದರ ಜತೆಗೆ ಅನಗತ್ಯವಾಗಿ ದ್ವಿಚಕ್ರವಾಹನದಲ್ಲಿ ಓಡಾಡುವವರ ಮೇಲೆ ಕ್ರಮ ಕೈಗೊಂಡು ವಾಹನವನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಎನ್.ಅರ್.ಬಡಾವಣೆಯಲ್ಲಿ ಕೆಲ ದಿನಸಿ ಪದಾರ್ಥಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದ್ದು ಅದಕ್ಕೆ ಕಡಿವಾಣ ಹಾಕಬೇಕೆಂದು ತಾಲೂಕು ಆಡಳಿತಕ್ಕೆ ಸೂಚನೆ ನೀಡಿದರು.ಸಭೆಯಲ್ಲಿ ತಹಸೀಲ್ದಾರ್ ಡಿ.ಹನುಮಂತರಾಯಪ್ಪ, ತಾಪಂ ಇಒ ಶ್ರೀನಿವಾಸ್, ಡಿವೈಎಸ್‌ಪಿ ಶ್ರೀನಿವಾಸ್, ನಗರಠಾಣೆಯ ಇನ್ಸ್‌ಪೆಕ್ಟರ್ ಜೆ.ಆನಂದ್ ಕುಮಾರ್, ಗ್ರಾಮಾಂತರ ಠಾಣೆ ಸಿಪಿಐ ಕೆ.ಎಂ.ಶ್ರೀನಿವಾಸಪ್ಪ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net