

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ
ಟ್ರ್ಯಾಕ್ಟರ್ ತೊಳೆಯಲು ಹೋಗಿದ್ದ ಯುವಕ ನೀರು ಪಾಲಾದ ಘಟನೆ ತಾಲೂಕಿನ ಕುಸುಗಲ್ ಗ್ರಾಮದ ಗೋಪನಕೊಪ್ಪ ರಸ್ತೆ ಬಳಿಯ ಕ್ವಾರಿಯಲ್ಲಿ ಸಂಭವಿಸಿದೆ.
ಸಾಗರ (18) ಮೃತ ಯುವಕ. ಸ್ನೇಹಿತರೊಂದಿಗೆ ಕ್ವಾರಿಗೆ ಇಳಿದಿದ್ದ ಯುವಕನಿಗೆ ಈಜು ಬರುತ್ತಿರಲಿಲ್ಲ. ಟ್ರ್ಯಾಕ್ಟರ್ ತೊಳೆಯುತ್ತ ಹಿಂದೆ ಸರಿದಾಗ ದೊಡ್ಡ ಕಂದಕಕ್ಕೆ ಜಾರಿ ಬಿದ್ದಿದ್ದು, ಸ್ನೇಹಿತರಿಗೂ ಗೊತ್ತಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಹೊರ ತೆಗೆದಿದ್ದಾರೆ. ಗ್ರಾಮಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.