ಕ್ಷಯ ಮುಕ್ತ ಭಾರತ ಗುರಿಯಾಗಲಿ

oplus_1024
oplus_1024
Published on

ಚಿತ್ರದುರ್ಗ: ಸಾರ್ವಜನಿಕ ಸ್ಥಳಗಳಲ್ಲಿ ಕೆಮ್ಮುವಾಗ ಮತ್ತು ಸೀನುವಾಗ ಕರವಸ್ತ್ರ ಅಡ್ಡ ಹಿಡಿದು ರೋಗ ಹರಡದಂತೆ ನೋಡಿಕೊಳ್ಳಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ. ಗಿರೀಶ್ ಹೇಳಿದರು.

ಚಿತ್ರದುರ್ಗ ತಾಲೂಕು ಪಂಡರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಕ್ಷಯ ಮುಕ್ತ 100 ದಿನಗಳ ಅಭಿಯಾನ ತೀವ್ರ ಪ್ರಚಾರ ಆಂದೋಲನದಲ್ಲಿ ಮಾತನಾಡಿ, ಕ್ಷಯ ರೋಗಿಗಳು ಕೆಮ್ಮುವಾಗ ಮತ್ತು ಸೀನುವಾಗ ರೋಗಾಣು ಗಾಳಿ ಮೂಲಕ ಆರೋಗ್ಯವಂತ ವ್ಯಕ್ತಿಯ ಶ್ವಾಸಕೋಶ ಸೇರಿ ಸೋಂಕು ಉಂಟುಮಾಡುತ್ತದೆ. ಕ್ಷಯರೋಗವನ್ನು ಬೇಗ ಪತ್ತೆ ಹಚ್ಚಿ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ಪಡೆದು ಕ್ಷಯ ಮುಕ್ತ ಭಾರತಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್ ಮಾತನಾಡಿ, ಕಳೆದ ಡಿಸೆಂಬರ್ 7ರಿಂದ ಪ್ರಾರಂಭವಾದ ಈ ಅಭಿಯಾನ ಮಾ. 24ರವರೆಗೆ ಜರುಗಲಿದೆ. ಈ ಸಮಯದಲ್ಲಿ ಎಲ್ಲ ಗ್ರಾಮಗಳಲ್ಲಿ ಆಶಾ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಸಮುದಾಯ ಆರೋಗ್ಯ ಅಧಿಕಾರಿಗಳು ಮನೆ, ಮನೆಗೆ ಭೇಟಿ ನೀಡಿ ಕ್ಷಯರೋಗದ ಮಾಹಿತಿ ಶಿಕ್ಷಣದ ಕರಪತ್ರ ನೀಡಲಿದ್ದಾರೆ. ಈ ವೇಳೆ ರೋಗ ಲಕ್ಷಣಗಳಿದ್ದರೆ ಸಂಕೋಚ ಬಿಟ್ಟು ತಿಳಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಕ್ಷಯ ರೋಗ ವಿಭಾಗದ ಮೇಲ್ವಿಚಾರಣಾಧಿಕಾರಿ ಮಹೇಂದ್ರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ, ಪಂಡರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಕ್ಷತಾ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಕೃಷ್ಣಪ್ಪ, ಸಿದ್ದೇಶ್, ಪ್ರವೀಣ್, ಹಿರಿಯ ಆರೋಗ್ಯ ಸುರಕ್ಷತಾ ಅಧಿಕಾರಿ ಜೆ. ಮಮತಾ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net