ಕ್ಷಯ ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

17-07-Shiva-6
ರಾಯಚೂರಿನ ಹರಿಜನವಾಡದ ಸಮುದಾಯ ಭವನದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಕ್ಷಯ ರೋಗ ಪತ್ತೆ ಆಂದೋಲನ ಕಾರ್ಯಕ್ರಮವನ್ನು ಡಿಎಚ್‌ಒ ಡಾ.ಸುರೇಂದ್ರಬಾಬು ಉದ್ಘಾಟಿಸಿದರು. ಜಿಲ್ಲಾ ಕ್ಷಯರೋಗ ನಿರ್ಮೂಲನಾಕಾರಿ ಡಾ.ಮಹ್ಮದ್ ಶಾಕೀರ್ ವೈದ್ಯರಾದ ಡಾ.ಗಣೇಶ, ಡಾ.ಸತ್ಯನಾರಾಯಣ, ಡಾ.ನಂದಿತಾ, ಆರೋಗ್ಯ ನಿರೀಕ್ಷಣಾಕಾರಿ ರಂಗರಾವ್ ಕುಲಕರ್ಣಿ ಇದ್ದರು.
Published on

ರಾಯಚೂರು
ಕ್ಷಯ ರೋಗಿಗಳು ಕೆಮ್ಮುವಾಗ ಗಾಳಿಯ ಮೂಲಕ ಮತ್ತೊಬ್ಬರಿಗೆ ಹರಡುತ್ತಿದ್ದು, ರೋಗಿಗಳು ಕೆಮ್ಮುವಾಗ, ಸೀನುವಾಗ ಕರವಸ ಬಳಸುವ ಮೂಲಕ ಮತ್ತೊಬ್ಬರಿಗೆ ಕ್ಷಯ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಡಿಎಚ್‌ಒ ಡಾ.ಸುರೇಂದ್ರಬಾಬು ಹೇಳಿದರು.
ಸ್ಥಳೀಯ ಹರಿಜನವಾಡದ ಸಮುದಾಯ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕ್ಷಯ ರೋಗ ಪತ್ತೆ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿ, ಕ್ಷಯ ರೋಗ ಲಕ್ಷಣಗಳು ಕಂಡು ಬಂದಲ್ಲಿ ಸಕಾಲಕ್ಕೆ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆದುಕೊಂಡರೆ ಗುಣಮುಖಗೊಳ್ಳಬಹುದಾಗಿದೆ ಎಂದರು.
ಜನರು ಆರೋಗ್ಯ ಸಂಪೂರ್ಣ ಹದಗೆಟ್ಟಾಗ ಮಾತ್ರ ವೈದ್ಯರಲ್ಲಿಗೆ ಬರುತ್ತಾರೆ. ರೋಗ ಲಕ್ಷಣಗಳು ಕಾಣಿಸಿಕೊಂಡ ತಕ್ಷಣ ವೈದ್ಯರನ್ನು ಸಂಪರ್ಕಿಸಿದರೆ ರೋಗ ಉಲ್ಭಣಗೊಳ್ಳುವುದನ್ನು ತಡೆಗಟ್ಟಬಹುದಾಗಿದೆ. ಇಲಾಖೆ ಸಿಬ್ಬಂದಿ ಮನೆಗೆ ಬಂದಾಗ ಸಮರ್ಪಕ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಜಿಲ್ಲಾ ಕ್ಷಯರೋಗ ನಿರ್ಮೂಲನಾಕಾರಿ ಡಾ.ಮಹ್ಮದ್ ಶಾಕೀರ್ ಮಾತನಡಿ, ಕ್ಷಯ ರೋಗ ತ್ವರಿತ ಪತ್ತೆಗಾಗಿ ಜಿಲ್ಲಾ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಯಂತ್ರೋಪಕರಣಗಳನ್ನು ಪೂರೈಸಲಾಗಿದೆ. ಜಿಲ್ಲೆಯನ್ನು ಕ್ಷಯ ಮುಕ್ತವಾಗಿಸಲು ಗುರಿ ಹಾಕಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಆ.2ರವರೆಗೆ ಕ್ಷಯ ರೋಗ ಪತ್ತೆ ಆಂದೋಲನ ನಡೆಯಲಿದ್ದು, 370 ತಂಡಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ವೈದ್ಯರಾದ ಡಾ.ಗಣೇಶ, ಡಾ.ಸತ್ಯನಾರಾಯಣ, ಡಾ.ನಂದಿತಾ, ಡಾ.ದಿವ್ಯ, ಆರೋಗ್ಯ ನಿರೀಕ್ಷಣಾಕಾರಿ ರಂಗರಾವ್ ಕುಲಕರ್ಣಿ, ಸಿಬ್ಬಂದಿಗಳಾದ ಖಾಸಿಂಸಾಬ್, ಯುಸ್ೂ, ಪ್ರದೀಪ, ಪ್ರಕಾಸ, ಖಮರುದ್ದೀನ್ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net