ಕ್ಷುಲಕ ಕಾರಣಕ್ಕೆ ಜಗಳ, ಗಾಳಿಯಲ್ಲಿ ಗುಂಡು; ಎಂಟು ಮಂದಿ ವಶಕ್ಕೆ ಪಡೆದ ಪೊಲೀಸರು

Upp_Fight
Published on

ಹಾಸನ: ಹಾಸನ ತಾಲೂಕಿನ ಬ್ಯಾಡರಹಳ್ಳಿ ಟೋಲ್ ಗೇಟ್ ಬಳಿ ಶುಕ್ರವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಯುವಕರ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಜಗಳ ವಿಕೋಪಕ್ಕೆ ತಿರುಗಿದಾಗ ಒಂದು ಗುಂಪಿನ ಯುವಕ ರಿವಾಲ್ವಾರ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ.

ಟೋಲ್ ಬಳಿ ಶುಕ್ರವಾರ ರಾತ್ರಿ ಕೇರಳದ ಕಟಿಯಾರ್‌ನಿಂದ ದಾವಣಗೆರೆಗೆ ತೆರಳುತ್ತಿದ್ದ ಕಾರಿನಲ್ಲಿ ಗಣೇಶ್, ನಿಂಗರಾಜು, ಸಂಜಯ್, ಗಿರೀಶ್, ಕಿರಣ್ ಪ್ರಯಾಣಿಸುತ್ತಿದ್ದರು. ಹಾಗೆಯೇ ಕೊಡಗಿಗೆ ತೆರಳುತ್ತಿದ್ದ ಕಾರಿನಲ್ಲಿ ಬೋಪಣ್ಣ, ಚೇತನ್, ಸಿ.ಎನ್.ಯೋಗೇಶ್ ಪ್ರಯಾಣಿಸುತ್ತಿದ್ದರು. ಟೋಲ್ ಗೇಟಿ ಬಳಿ ಕಾರನ್ನು ಮುಂದೆ ತೆಗೆಯುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಜಗಳ ಶುರುವಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಬಡಿದಾಡಿಕೊಂಡಿದ್ದಾರೆ. ನಂತರ ಕಟ್ಟಾಯ ಬಳಿ ಕಾರುಗಳನ್ನು ನಿಲ್ಲಿಸಿಕೊಂಡು ಮತ್ತೆ ಬಡೆದಾಡಿಕೊಂಡಿದ್ದಾರೆ. ಈ ವೇಳೆ ಯೋಗೇಶ್ ಎಂಬುವರು ತಕ್ಷಣ ತಮ್ಮ ಬಳಿಯಿದ್ದ ರಿವಾಲ್ವಾರ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ವಿಚಾರ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎರಡು ಕಡೆಯವರು ದೂರು ನೀಡಿದ್ದು, ಪ್ರಕರಣ ದಾಖಲಿಸಲಾಗಿದೆ. ಘಟನೆ ಸಂಬಂಧ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಗೊರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net