ಕ್ಷೇತ್ರದ ಅಭಿವೃದ್ಧಿಗೆ ಎಲ್ಲರೂ ಬೆಂಬಲಿಸಿ

amadalli
Published on

ಕಾರವಾರ: ಕ್ಷೇತ್ರದ ಅಭಿವೃದ್ಧಿಗೆ ಪ್ರತಿಯೊಬ್ಬ ನಾಗರಿಕ ಮತ್ತು ಜನ ಪ್ರತಿನಿಧಿಗಳು ಬೆಂಬಲಿಸಬೇಕು ಎಂದು ಶಾಸಕಿ ರೂಪಾಲಿ ನಾಯ್ಕ ಹೇಳಿದರು.

ತಾಲೂಕಿನ ಅಮದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2017-18ನೇ ಸಾಲಿನ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಮಂಜೂರಾದ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಅಭಿವೃದ್ಧಿ ಎಂದರೆ ಕೇವಲ ರಸ್ತೆ ಚರಂಡಿ ನಿರ್ಮಾಣ ಅಷ್ಟೇ ಅಲ್ಲ. ಕೈಗಾರಿಕೆಗಳ ಸ್ಥಾಪನೆ, ಬಂದರು ನಿರ್ಮಾಣ ಮಾಡುವ ಮೂಲಕ ಉದ್ಯೋಗ ಸೃಷ್ಟಿ ಮಾಡಿ ಆರ್ಥಿಕವಾಗಿ ಸದೃಢವಾಗುವುದಾಗಿದೆ ಎಂದರು.

ಸ್ಥಳೀಯ ಯುವಕ, ಯುವತಿಯರು ಕಡಿಮೆ ಸಂಬಳಕ್ಕಾಗಿ ಬೇರೆ ಬೇರೆ ಊರುಗಳಿಗೆ ಹೋಗುತ್ತಿದ್ದರೆ. ಅದಕ್ಕಾಗಿ ಈ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಕೈಗಾರಿಕೆ ಸ್ಥಾಪನೆ ಅವಶ್ಯಕವಾಗಿದೆ ಎಂದರು. ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಚೈತ್ರಾ ಕೊಠಾರಕರ್ ಹಾಗೂ ಬಿಜೆಪಿ ಮುಖಂಡರು ಇದ್ದರು.

ಸರ್ವಿಸ್ ರಸ್ತೆ ನಿರ್ವಿುಸುವಂತೆ ಮನವಿ: ಅಮದಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಚತುಷ್ಪಥ ನಿರ್ಮಾಣ ಸಂದರ್ಭದಲ್ಲಿ ಗುತ್ತಿಗೆ ಕಂಪನಿ ಐಆರ್​ಬಿಯಿಂದ ಸರ್ವಿಸ್ ರಸ್ತೆ ನಿರ್ವಿುಸಬೇಕು ಎಂದು ಗ್ರಾಮಸ್ಥರು ಶಾಸಕರಿಗೆ ಮನವಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net