

ಚಿತ್ರದುರ್ಗ: ವ್ಯರ್ಥವಾಗಿ ಹರಿದು ಹೋಗುವ ಮಳೆ ನೀರು ಶೇಖರಣೆಗೆ ತಾಲೂಕಿನ ಹಳ್ಳಿಗಳಲ್ಲಿ ಚೆಕ್‌ಡ್ಯಾಂಗಳನ್ನು ಕಟ್ಟಿಸಿದ್ದರಿಂದ ಅಂರ್ತಜಲ ವೃದ್ಧಿಯಾಗಿದೆ ಎಂದು ಶಾಸಕ ಡಾ.ಎಂ. ಚಂದ್ರಪ್ಪ ಹೇಳಿದರು.
ಹೊಳಲ್ಕೆರೆ ತಾಲೂಕಿನ ಕುಮ್ಮಿನಘಟ್ಟದಲ್ಲಿ 2.10 ಕೋಟಿ ರೂ.ವೆಚ್ಚದಲ್ಲಿ ಚೆಕ್‌ಡ್ಯಾಂ ನಿರ್ಮಾಣಕ್ಕೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿ,
30 ವರ್ಷಗಳ ಹಿಂದೆ ಮೊದಲ ಬಾರಿಗೆ ಭರಮಸಾಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದಾಗ ಸರಿಯಾದ ರಸ್ತೆಯಿರಲಿಲ್ಲ. ಗೆದ್ದ ನಂತರ 386 ಹಳ್ಳಿಗಳಲ್ಲಿ ರಸ್ತೆ ನಿರ್ಮಿಸಿದ್ದರಿಂದ ಮತದಾರರು ರಸ್ತೆ ರಾಜ ಎಂದು ಅಭಿಮಾನದಿಂದ ಕರೆದು 2ನೇ ಬಾರಿಗೂ ನನ್ನನ್ನು ಗೆಲ್ಲಿಸಿದರು. ನಾಟಕ ಮಾಡಿಕೊಂಡು ತಿರುಗಾಡುವ ರಾಜಕಾರಣಿ ನಾನಲ್ಲ. ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ ಎಂದರು.
ತಾಲೂಕಿನಾದ್ಯಂತ ಎಲ್ಲ ಕೆರೆ ಕಟ್ಟೆಗಳಿಗೆ ನೀರು ತುಂಬಿಸಿದ್ದೇನೆ. ಶಾಲಾ-ಕಾಲೇಜುಗಳ ಕಟ್ಟಡ, ಹೈಟೆಕ್ ಆಸ್ಪತ್ರೆ ನಿರ್ಮಾಣ, ಮುರಾರ್ಜಿ ದೇಸಾಯಿ, ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆ, ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಅನುಕೂಲಕ್ಕೆ ಸ್ವಂತ ಹಣದಲ್ಲಿ ಬಸ್‌ಗಳನ್ನು ನೀಡಿದ್ದೇನೆ ಎಂದರು.
ಚಿಕ್ಕಜಾಜೂರಿನ ಕೋಟೆಹಾಳ್ ಸಮೀಪ 500 ಕೋಟಿ ರೂ. ವೆಚ್ಚದಲ್ಲಿ ಪವರ್ ಸ್ಟೇಷನ್ ನಿರ್ಮಾಣ ಮಾಡಲಾಗುತ್ತಿದೆ ಎಂದರು.
ಚೆಕ್‌ಡ್ಯಾಂ ನಿರ್ಮಾಣ ಕಾಮಗಾರಿ 2 ತಿಂಗಳಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.
ಗ್ರಾಪಂ ಅಧ್ಯಕ್ಷೆ ಹಾಲಮ್ಮ ನಟರಾಜ್, ಸದಸ್ಯರಾದ ರಮೇಶ್, ಚಂದ್ರಪ್ಪ, ತಿಮ್ಮಪ್ಪ, ಮಂಜುನಾಥ, ಕರಿಯಪ್ಪ, ಬಸವರಾಜ್, ರಾಜಪ್ಪ, ವೆಂಕಟೇಶ್, ತಿಮ್ಮಪ್ಪ, ರುದ್ರಪ್ಪ, ಲೋಕೇಶ್, ತಮ್ಮಣ್ಣ, ರುದ್ರಪ್ಪ, ಗಿರೀಶ್, ಕರಿಬಸಪ್ಪ, ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್‌ಗಳಾದ ನಾಗರಾಜ್, ಶರಣಪ್ಪ ಹಾಗೂ ಗ್ರಾಮದ ಮುಖಂಡರು ಇದ್ದರು.