

ಚಿತ್ರದುರ್ಗ:ನಗರದ ಸಾಹಿತಿ ಬಿ.ಎಲ್.ವೇಣು ಅವರ ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಗುರುವಾರ ಭೇಟಿ ನೀಡಿ ಗೌರವಿಸಿದರು. ಶಾಸಕ ರಾಗಿ ಪ್ರಥಮ ಬಾರಿಗೆ ತಮ್ಮ ನಿವಾಸಕ್ಕೆ ಆಗಮಿಸಿದ ವೀರೇಂದ್ರ ಅವರನ್ನು ವೇಣು ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಚಿತ್ರದುರ್ಗದ ಕೋಟೆ ಅಭಿವೃದ್ಧಿ,ಪ್ರವಾಸಿಗರಿಗೆ ಮೂಲ ಸೌಕರ್ಯಗಳನ್ನು ಒದಗಿಸುವಂತೆ ವೇಣು ಅವರು ಶಾಸಕರಿಗೆ ಸಲಹೆ ನೀಡಿದರು.
ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಕುರಿತು ಚರ್ಚಿಸಿದರು. ದಾವಣಗೆರೆ-ತುಮಕೂರು ನೇರ ರೈಲ್ವೆ ಯೋಜನೆ ತ್ವರಿತವಾಗಿ ಅನುಷ್ಠಾನ ವಾಗ ಬೇಕಿದೆ ಎಂದರು. ಕ್ಷೇತ್ರದ ಅಭಿವೃದ್ಧಿ,ಜನರ ನಿರೀಕ್ಷೆಗಳಿಗೆ ಪೂರಕವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಶಾಸಕರು ಹೇಳಿದರು.