ಕ್ಷೇತ್ರದ ಸಮಗ್ರ ಪ್ರಗತಿಗೆ ಆದ್ಯತೆ

15ckd1
Published on

ಚಿಕ್ಕೋಡಿ: ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ಸ್ವಾತಂತ್ರ‍್ಯೋತ್ಸವ ಆಚರಿಸಲಾಯಿತು.

ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಮಾತನಾಡಿ, ಕ್ಷೇತ್ರದ ಅಭಿವೃದ್ಧಿಗೆ ಬದ್ಧವಾಗಿದ್ದೇನೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಗಣೇಶ ಹುಕ್ಕೇರಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ೫೦ ಕೋಟಿ ರೂ. ಅನುದಾನದಲ್ಲಿ ೧೦ ಕೋಟಿ ರೂ. ಚಿಕ್ಕೋಡಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಮೀಸಲಿಡಲಾಗಿದೆ ಎಂದರು. ಉಪವಿಭಾಗಾಧಿಕಾರಿ ಸುಭಾಷ ಸಂಪಗಾವಿ ಧ್ವಜಾರೋಹಣ ನೆರವೇರಿಸಿದರು.

ಎಲ್‌ಸಿ ಪ್ರಕಾಶ ಹುಕ್ಕೇರಿ, ಮಾಜಿ ಎಂಎಲ್‌ಸಿ ಮಹಾಂತೇಶ ಕವಟಗಿಮಠ, ಮಾಜಿ ಎಂಎಲ್‌ಎ ಬಾಳಾಸಾಹೇಬ ವಡ್ಡರ, ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಮಹಾವೀರ ಮೋಹಿತೆ, ಪ್ರಭಾಕರ ಕೋರೆ, ಸಂಜಯ ಕವಟಗಿಮಠ, ಪ್ರವೀಣ ಕಾಂಬಳೆ, ಎಚ್.ಎಸ್. ನಸಲಾಪುರೆ, ತಹಸೀಲ್ದಾರ್ ಚಿದಂಬರ ಕುಲಕರ್ಣಿ, ಪುರಸಭೆ ಸದಸ್ಯರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net