ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಶ್ರಮ

kotnur
Published on

ಕಲಬುರಗಿ: ಕಾಂಗ್ರೆಸ್ ಗೆದ್ದರೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಆಗಲಿದೆ. ನಿರಂತರವಾಗಿ ಶ್ರಮಿಸಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಮನವಿ ಮಾಡಿದರು. ಕೋಟನೂರ (ಡಿ) ಗ್ರಾಮದಲ್ಲಿ ಮಂಗಳವಾರ ಏರ್ಪಡಿಸಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿ, ದಕ್ಷಿಣ ಕ್ಷೇತ್ರದ ಮತದಾರರು ಅಲ್ಲಮಪ್ರಭು ಪಾಟೀಲ್‌ಗೆ ಬೆಂಬಲ ನೀಡಿದಂತೆ ತಮಗೂ ಆಶೀರ್ವಾದ ನೀಡಬೇಕು ಎಂದರು. ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಗೃಹಲಕ್ಷಿö್ಮÃ, ಗೃಹಜ್ಯೋತಿ, ಶಕ್ತಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಗಳ ಲಾಭ ಫಲಾನುಭವಿಗಳಿಗೆ ತಲುಪುತ್ತಿದೆ. ಆರ್ಥಿಕ ಸಮಾನತೆ ಹಾಗೂ ಸ್ವಾಭಿಮಾನದ ಜೀವನಕ್ಕೆ ಈ ಯೋಜನೆ ಸಹಕಾರಿ ಆಗಿವೆ ಎಂದರು. ಶಾಸಕ ಅಲ್ಲಮಪ್ರಭು ಪಾಟೀಲ್, ಮುಖಂಡ ನೀಲಕಂಠರಾವ ಮೂಲಗೆ ಮಾತನಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net