ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಪಣ ತೊಡೋಣ

IMG20221124113727
Published on

ಬೈಲಕುಪ್ಪೆ: ಪಿರಿಯಾಪಟ್ಟಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವವರನ್ನು ಆಯ್ಕೆ ಮಾಡಿ ವಿಧಾನಸಭೆಗೆ ಕಳುಹಿಸುವ ನಿಟ್ಟಿನಲ್ಲಿ ನಾವೆಲ್ಲರೂ ಪಣ ತೊಡಬೇಕಾಗಿದೆ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಳಾ ಸೋಮಶೇಖರ್ ತಿಳಿಸಿದರು.

ಸಮೀಪದ ಖಾಸಗಿ ಹೋಟೆಲ್ನಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಕಾರ್ಯಗಳ ಬಗ್ಗೆ ಚರ್ಚಿಸಬೇಕಿದೆ. ಜತೆಗೆ ಕಾರ್ಯಕರ್ತರ ಆಹವಾಲು ಆಲಿಸಿ ಹೆಜ್ಜೆ ಇಡಬೇಕಿದೆ. ನಮ್ಮ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಾತಿ ಘೋಷಣೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಕೆಲಸಗಳ ಬಗ್ಗೆ ಜನರಿಗೆ ಮನದಟ್ಟು ಮಾಡಬೇಕಿದೆ ಎಂದರು.

ಪಕ್ಷದ ತಾಲೂಕು ಅಧ್ಯಕ್ಷ ರಾಜೇಗೌಡ ಮಾತನಾಡಿ, ತಾಲೂಕಿನಲ್ಲಿ 34 ಗ್ರಾಮ ಪಂಚಾಯಿತಿಗಳಿದ್ದು, ಕಾರ್ಯಕರ್ತರು ಒಟ್ಟುಗೂಡಿ ಬಿಜೆಪಿ ವಿಜಯೋತ್ಸವ ಆಚರಿಸಬೇಕಿದೆ ಎಂದರು.
ಮಾಜಿ ಶಾಸಕ ಎಚ್.ಸಿ.ಬಸವರಾಜು, ಮಾಜಿ ಸಚಿವ ವಿಜಯಶಂಕರ್ ಮಾತನಾಡಿದರು. ತಂಬಾಕು ಮಂಡಳಿ ನಿರ್ದೇಶಕ ವಿಕ್ರಮ್ ರಾಜ್, ವಕೀಲ ಲೋಕೇಶ್, ಪಕ್ಷದ ಜಿಲ್ಲಾ ಉಪಾಧ್ಯಕ್ಷ ಅಣ್ಣಪ್ಪ, ತಾಲೂಕು ಮಾಜಿ ಅಧ್ಯಕ್ಷ ರವಿ, ಮುಖಂಡರಾದ ಕೌಲನಹಳ್ಳಿ ಸೋಮಶೇಖರ್, ಬೆಮ್ಮತಿ ಚಂದ್ರು, ಪ್ರವೀಣ್, ವಿಜಯಕುಮಾರ್, ನಿವೃತ್ತ ಎಎಸ್‌ಐ ಜವರಪ್ಪ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net