ಕ್ಷೇತ್ರದಲ್ಲಿ ಮೂಲ ಸೌಕರ್ಯಕ್ಕೆ ಒತ್ತು

UNTILETED 07
Published on

ಕೊಟ್ಟೂರು: ಪಟ್ಟಣದ ಜನತೆಗೆ ಸಿಹಿ ನೀರನ್ನು ಪೂರೈಕೆ ಮಾಡಲಾಗುವುದು ಎಂದು ಶಾಸಕ ನೇಮಿರಾಜ್ ನಾಯ್ಕ ಹೇಳಿದರು.

ಪಟ್ಟಣದಲ್ಲಿ ಮಂಗಳವಾರ ಪಟ್ಟಣದ ಡಿಎಂಎಫ್ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಅಧಿಕಾರಿದ ಅವಧಿಯಲ್ಲಿ ಪಟ್ಟಣದ ಎಲ್ಲ ವಾರ್ಡ್‌ಗಳಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ನಾಲ್ಕನೇ ವಾರ್ಡ್‌ನ ಸಿ.ಸಿ.ಚರಂಡಿ ನಿರ್ಮಾಣಕ್ಕೆ 50 ಲಕ್ಷ ರೂ., 7ನೇ ವಾರ್ಡ್ ಸಿ.ಸಿ. ಚರಂಡಿ ನಿರ್ಮಾಣಕ್ಕೆ 50 ಲಕ್ಷ ರೂ., 8ನೇ ವಾರ್ಡ್‌ನ ಸಿಸಿ ಚರಂಡಿ ನಿರ್ಮಾಣಕ್ಕೆ 50 ಲಕ್ಷ ರೂ., 11ನೇ ವಾರ್ಡ್‌ನಲ್ಲಿ ಸಿಸಿ ಚರಂಡಿ ನಿರ್ಮಾಣಕ್ಕೆ 50 ಲಕ್ಷ ರೂ., 16ನೇ ವಾರ್ಡ್‌ನಲ್ಲಿ ಸಿ.ಸಿ. ಚರಂಡಿ ನಿರ್ಮಾಣಕ್ಕೆ 25 ಲಕ್ಷ ರೂ., 18ನೇ ವಾರ್ಡ್‌ನಲ್ಲಿ ಸಿಸಿ ಚರಂಡಿ ನಿರ್ಮಾಣಕ್ಕೆ 50 ಲಕ್ಷ ರೂ. ಗಳ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಇದಕ್ಕೂ ಮೊದಲು ತಾಲೂಕಿನ ಗೊಲ್ಲರಹಳ್ಳಿಯಲ್ಲಿ ಸಿಸಿ ಚರಂಡಿ ನಿರ್ಮಾಣಕ್ಕೆ 30 ಲಕ್ಷ ರೂ., ದೂಪದಹಳ್ಳಿಯಲ್ಲಿ ಸಿ.ಸಿ. ಚರಂಡಿ ನಿರ್ಮಾಣಕ್ಕೆ 30 ಲಕ್ಷ ರೂ.ಗಳ ಕಾಮಗಾರಿಗೆ ಚಾಲನೆ ನೀಡಿದರು. ಪಟ್ಟಣ ಪಂಚಾಯಿತಿ ಜಿಪಂ ಮಾಜಿ ಸದಸ್ಯ ಎಂ.ಎಂ.ಜೆ. ಹರ್ಷವರ್ಧನ, ಪಪಂ ಅಧ್ಯಕ್ಷೆ ಬದ್ದಿ ರೇಖಾ, ಪಪಂ ಸದಸ್ಯ ತೋಟದ ರಾಮಣ್ಣ, ಪ್ರಮುಖರಾದ ಬಾವಿಕಟ್ಟಿ ಶಿವಾನಂದ, ಬೋರವೆಲ್ ತಿಪ್ಪೇಸ್ವಾಮಿ, ಹಗರಿಬೊಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಮಲ್ಲಿಕಾರ್ಜುನ, ಎಂ.ಎಂ.ಜೆ. ಶೋಭಿತ್, ದೀಪಾ ಹೋಟೆಲ್ ಪ್ರಕಾಶ, ಅಟವಳಿಗಿ ಸಂತೋಷ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net