

ಸೇಡಂ: ಮಳೆಯಿAದ ಕ್ಷೇತ್ರದಲ್ಲಿ ರಸ್ತೆ, ಚರಂಡಿ, ಕುಡಿವ ನೀರು ಸೇರಿ ಏನೆಲ್ಲ ಸಮಸ್ಯೆಗಳು ಆಗಿವೆ ಎಂಬುದರ ಬಗ್ಗೆ ತ್ವರಿತವಾಗಿ ವರದಿ ತಯಾರಿಸಿ ಸಲ್ಲಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಾಕೀತು ಮಾಡಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಟಾಸ್ಕ್ಪೋರ್ಸ್ ಸಭೆ ನಡೆಸಿದ ಅವರು, ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡಬೇಕು. ಹಾನಿ ವರದಿ ಸಲ್ಲಿಸಬೇಕು. ಅಲ್ಲದೆ ತ್ವರಿತ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು. ಶಾಲಾ ಕೋಣೆಗಳು ಸೋರುತ್ತಿದ್ದರೆ, ರಸ್ತೆ ಸಮಸ್ಯೆ, ಕುಡಿಯುವ ನೀರು ಹಾಗೂ ವಿದ್ಯುತ್ ಸಮಸ್ಯೆ ಇದ್ದಲ್ಲಿ ಪಿಡಿಒ ಮತ್ತು ಸಂಬAಧಪಟ್ಟ ಅಧಿಕಾರಿಗಳು ಮೇಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ಎಂದು ಸೂಚನೆ ನೀಡಿದರು.
ಕುರುಕುಂಟಾ ಗ್ರಾಮದಲ್ಲಿ ಸರ್ಕಾರಿ ಶಾಲೆ ಸೋರುತ್ತಿದೆ ಎಂಬ ದೂರು ಬಂದಿದೆ. ಅದನ್ನು ಪರಿಶೀಲಿಸಿ ಕ್ರೀಯಾಯೋಜನೆ ರೂಪಿಸಿ ಪಟ್ಟಿಸಲ್ಲಿಸಬೇಕು. ಹಲವು ಗ್ರಾಮಗಳಲ್ಲಿ ಜಲಜೀವನ ಮಿಷನ್ ಕಾಮಗಾರಿ ಪೂರ್ಣಗೊಂಡಿಲ್ಲ. ಈ ಗಮನಹರಿಸಿ ಕೂಡಲೇ ಕೆಲಸ ಮುಗಿಸಬೇಕು. ತಾಲೂಕಿನಲ್ಲಿನ ಬಿಸಿಎಂ ವಸತಿ ನಿಲಯಗಳ ರಿಪೇರಿ ಹಾಗೂ ಇನ್ನಿತರ ಕಾರ್ಯಗಳಿಗಾಗಿ 3.5 ಕೋಟಿ ರೂ. ಬೇಕಾಗಿದೆ ಎಂದು ಹೇಳಲಾಗುತ್ತಿದೆ. ಕ್ರಿಯಾಯೋಜನೆ ಸಲ್ಲಿಸಿ, ಇಲಾಖೆಯಡಿ ಅನುದಾನ ಬಿಡುಗಡೆ ಮಾಡಿಸಲಾಗುವುದು ಎಂದು ಹೇಳಿದರು.
ಪುರಸಭೆ ಮುಖ್ಯಾಧಿಕಾರಿ ಶರಣಯ್ಯಸ್ವಾಮಿ ಮಾತನಾಡಿ, ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಸಟಪಟನಳ್ಳಿಯ ಜಾಕ್‌ವೆಲ್‌ನಲ್ಲಿ ಕೆಲ ದಿನಗಳ ಹಿಂದೆ ಸವಳು ಹಾಗೂ ತ್ಯಾಜ್ಯ ತುಂಬಿತ್ತು. ಇದರಿಂದ ಸ್ವಲ್ಪ ತೊಂದರೆಯುAಟಾಗಿದ್ದು, ಈಗ ಸರಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಹಾಯಕ ಆಯುಕ್ತ ಪ್ರಭುರೆಡ್ಡಿ, ತಹಸೀಲ್ದಾರ್ ಶ್ರೀಯಾಂಕಾ ಧನಶ್ರೀ, ತಾಪಂ ಇಒ ಚನ್ನಪ್ಪ ರಾಯಣ್ಣವರ್ ಇತರರಿದ್ದರು.