

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಬೀದರ್ ಜಿಲ್ಲೆಯ ಶಾಸಕರು, ಅರಣ್ಯ ಮತ್ತು ಪರಿಸರ ಇಲಾಖೆ ಸಚಿವರಾದ ಈಶ್ವರ ಖಂಡ್ರೆ ಅವರಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಕರವೇ ಕಾವಲುಪಡೆ ಸಂಘಟನೆಯ ರಾಜ್ಯ ವಕ್ತಾರ ಅಮಿತ ಎಸ್ ನಾಲವಾರಕರ್ (ಮಂಜುನಾಥ) ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಸಚಿವರಾದ ಈಶ್ವರ ಖಂಡ್ರೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ತರಲು ಹಗಲು ರಾತ್ರಿ ಪಕ್ಷ ಸಂಘಟನೆ ಮಾಡಿದ್ದು, ಅವರಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ನೇಮಕ ಮಾಡಿ ಗಡಿ ಭಾಗ ಅಭಿವೃದ್ಧಿಗಾಗಿ ಅವಕಾಶ ನೀಡಬೇಕಾಗಿ ಮನವಿ ಮಾಡಿದ್ದಾರೆ.