ಖನಿಜಯುಕ್ತ ಆಹಾರ ಸೇವಿಸಿ

08 ಸಿರಗುಪ್ಪ 01
Published on

ಸಿರಗುಪ್ಪ: ಅಡಿಕೆ, ಗುಟ್ಖಾ, ಚಾಕಲೇಟ್ ಸೇವಿಸಿದರೆ ಹಲ್ಲುಗಳು ಹಾಳಾಗುತ್ತವೆ. ಹಲ್ಲಿನ ಸಮಸ್ಯೆ ಕಂಡು ಬಂದಲ್ಲಿ ವೈದ್ಯರ ಬಳಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ದಂತ ವೈದ್ಯ ಮಹಮ್ಮದ್ ಒವೈಸಿ ಕೊತ್ವಾಲ್ ತಿಳಿಸಿದರು.

ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮದಡಿ ತೆಕ್ಕಲಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರದಲ್ಲಿ ಮಾತನಾಡಿದರು.

ಈಗಿನ ಮಕ್ಕಳು ಸಿಹಿ ತಿನಿಸುಗಳು, ಬೇಕರಿ ತಿಂಡಿಗಳು, ಜಂಕ್ ಫುಡ್‌ಗಳನ್ನು ಹೆಚ್ಚಾಗಿ ಸೇವಿಸುತ್ತಿರುವುದರಿಂದ ಹಲ್ಲುಗಳು ಬೇಗ ಹಾಳಾಗುತ್ತಿವೆ. ಆಹಾರ ಸೇವಿಸಿದ ಮೇಲೆ ಬಾಯಿ ಮುಕ್ಕಳಿಸಬೇಕು. ಹಲ್ಲುಜ್ಜುವಾಗ ವಸಡಿನಲ್ಲಿ ರಕ್ತಸ್ರಾವ ಆಗುತ್ತಿದ್ದರೆ ವೈದ್ಯರ ಸಲಹೆ ಪಡೆದುಕೊಳ್ಳಬೇಕು. ಸೊಪ್ಪು, ತರಕಾರಿ, ಹಣ್ಣು, ರಾಗಿ ಮುದ್ದೆಯಂತಹ ಖನಿಜಯುಕ್ತ ಆಹಾರ ಸೇವಿಸುವುದರಿಂದ ಹಲ್ಲುಗಳ ರಕ್ಷಣೆ ಆಗುತ್ತದೆ ಎಂದರು. ಕ್ಷಕರಾದ ಎಚ್.ರಾಘಮ್ಮ, ಟಿ.ಸಿದ್ದಯ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net