

ಕಲಬುರಗಿ: ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದರು.
ಸಮಾವೇಶದ ಹಿನ್ನೆಲೆಯಲ್ಲಿ ಯಾವುದೇ ಮೆರವಣಿಗೆ ಇಲ್ಲದೇ ನೇರವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.
ರಾಧಾಕೃಷ್ಣ ದೊಡ್ಡಮನಿ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್, ಶಾಸಕರಾದ ಕನೀಜ್ ಫಾತಿಮಾ, ಎಂವೈ ಪಾಟೀಲ್, ಮಾಜಿ ಸಚಿವ ಬಾಬುರಾವ್ ಚಿಂಚನಸೂರ ಸಾಥ್ ನೀಡಿದರು.