ಖರ್ಗೆ ಓಲೈಕೆಗೆ ಸಂಪುಟ ಸಭೆ

1809Klb11
Published on

ಕಲಬುರಗಿ: ಕಾಂಗ್ರೆಸ್ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದು ಒಂದು ವರ್ಷದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಲಬುರಗಿ ನೆನಪಾಗಿದೆ ಎಂದು ಬಿಜೆಪಿ ರಾಜ್ಯಧ್ಯP್ಷÀ ಬಿ.ವೈ ವಿಜಯೇಂದ್ರ ವ್ಯಂಗ್ಯವಾಡಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರು ಮುಖ್ಯಮಂತ್ರಿಗಳಿಗೆ ಅಚಾನಾಕ್ ಆಗಿ ಕಲಬುರಗಿ ನೆನಪಾಗಿದೆ. ಜನ ಮೈಸೂರು ಮುಖ್ಯಮಂತ್ರಿ ಎನ್ನುತ್ತಿದ್ದಾರೆ. ಸಿಎಂ ಕುರ್ಚಿ ಅಲುಗಾಡುತ್ತಿದೆ. ಎಐಸಿಸಿ ಅಧ್ಯP್ಷÀರ ಒಲೈಕೆ ಮಾಡೋದಕ್ಕೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ಮಾಡಿz್ದÁರೆ. ಸಚಿವ ಸಂಪುಟ ಸಭೆಯಲ್ಲಿ ಹೊಸ ವಿಚಾರಗಳಿಲ್ಲ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಬೊಮ್ಮಾಯಿ ಕಾಲದ ಯೋಜನೆಗಳೇ ಇವೆ ಎಂದು ಹೇಳಿದರು.
ಡಿಕೆ ಶಿವಕುಮಾರ, ಆರ್.ವಿ.ದೇಶಪಾಂಡೆ ಮುಖ್ಯಮಂತ್ರಿ ಆಕಾಂಕ್ಷಿ ಎಂದಿದ್ದಾರೆ. ಈ ಬಗ್ಗೆ ಅವರಿಗೆ ಈ ಪ್ರಶ್ನೆ ಕೇಳಬೇಕು. ಮುಡಾ ಪ್ರಕರಣದಲ್ಲಿ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತ ಎಂದರು.

ಕಾನೂನು ಹಾಳುಮಾಡುವ ಹುನ್ನಾರ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ದೇಶದ್ರೋಹಿ ಚಟುವಟಿಕೆಗಳಿಗೆ ಹೆಚ್ಚು ಶಕ್ತಿ ದೊರೆಯುತ್ತಿದೆ. ಪ್ಯಾಲೆಸ್ತಿನ್ ಧ್ವಜ, ನಾಗಮಂಗಲ, ದಾವಣಗೆರೆ ಘಟನೆ, ರಾಮೇಶ್ವರಂ ಬಾಂಬ್ ಬ್ಲಾಸ್ಟ್ ಘಟನೆಯಲ್ಲೂ ದೇಶದ್ರೋಹಿಗಳ ಅಟ್ಟಹಾಸ ಹೆಚ್ಚಾಗಿದೆ. ಬೆಂಕಿ ಹಚ್ಚುವ, ಹಚ್ಚಿಸಿಕೊಳ್ಳುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ನಾಗಮಂಗಲ ಘಟನೆ ಸಣ್ಣದು ಎನ್ನುವ ಸರ್ಕಾರ ಕಾನೂನು ಸುವ್ಯವಸ್ಥೆ ಹದಗೆಡಿಸುವ ಹುನ್ನಾರ ನಡೆಸುತ್ತಿದ್ದೆಯಾ ಎನ್ನುವ ಸಂಶಯ ಮೂಡುತ್ತಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net