ಖರ್ಗೆಯವರಿಗೆ ಬೆದರಿಕೆ ಹಾಕಿದ್ದವರನ್ನು ಬಂಧಿಸಿ

Published on

ಬೀದರ್: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಪುತ್ರರಾದ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಿದ್ದವರನ್ನು ಸರ್ಕಾರ ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಎಐಸಿಸಿ ಸದಸ್ಯ ಆನಂದ ದೇವಪ್ಪ ಹಾಗೂ ಪಕ್ಷದ ಹಿರಿಯ ಮುಖಂಡ ದಶರಥ ದೊಡ್ಡಿ ಆಗ್ರಹಿಸಿದ್ದಾರೆ. ಖರ್ಗೆಯವರು ದೇಶ ಕಂಡಂಥ ಅಪರೂಪದ ರಾಜಕಾರಣಿ. ತಮ್ಮ ಇಡೀ ಜೀವನವೇ ಸಮಾಜದ ಅಭಿವೃದ್ಧಿ, ಬಡವರ, ದಲಿತರ ಹಿತಕ್ಕಾಗಿ ಮುಡುಪಾಗಿಟ್ಟು ಕೆಲಸ ಮಾಡುತ್ತಿದ್ದಾರೆ. ನ್ಯಾಯದ ಪರವಾಗಿ ಹೋರಾಟ ಮಾಡುತ್ತ ರಾಷ್ಟ್ರಮಟ್ಟದ ನಾಯಕರಾಗಿ ಹೊರಹೊಮ್ಮಿದ್ದಾರೆ. ಇವರಿಗೆ ಯಾರೋ ದುಷ್ಕರ್ಮಿಗಳು ಕರೆ ಮಾಡಿ ಬೆದರಿಕೆ ಹಾಕುವುದು ಅಕ್ಷಮ್ಯ ಅಪರಾಧ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ, ಕಿಡಿಗೇಡಿಗಳು ಯಾರೇ ಇರಲಿ, ಎಲ್ಲೇ ಇರಲಿ ಶೀಘ್ರ ಬಂಧಿಸಬೇಕು. ನಿರ್ಲಕ್ಷಿಸಿದರೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net