ಖಾದಿ ಖಾಕಿ ಖಾವಿಯಿಂದ ಜನಕಲ್ಯಾಣ

1605Klb02
Published on

ಕಲಬುರಗಿ: ಭಾವೈಕ್ಯತೆ ಮತ್ತು ಆಧ್ಯಾತ್ಮ ಜ್ಞಾನ ಭಾರತದ ಉಸಿರು. ಭಾರತೀಯ ಸಂಸ್ಕೃತಿ ಎಲ್ಲರನ್ನು ಒಗ್ಗೂಡಿಸುವುದೇ ಆಗಿದೆ ಹೊರತು ವಿಘಟಿಸುವುದಲ್ಲ. ಶುದ್ಧ ಮನಸ್ಸಿನಿಂದ ಖಾದಿ ಖಾಕಿ ಖಾವಿ ಕಾಯಕ ಮಾಡಿದರೆ ಲೋಕ ಕಲ್ಯಾಣ ಸಾಧ್ಯ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.

ಶ್ರೀನಿವಾಸ ಸರಡಗಿ ಚಿನ್ನದಕಂತಿ ಚಿಕ್ಕವೀರೇಶ್ವರ ಸಂಸ್ಥಾನ ಹಿರೇಮಠದಲ್ಲಿ ಬುಧವಾರ ಸಂಜೆ ಏರ್ಪಡಿಸಿದ್ದ ಡಾ.ರೇವಣಸಿದ್ಧ ಶಿವಾಚಾರ್ಯ ಷಷ್ಠಿಪೂರ್ತಿ ನಿಮಿತ್ತ ಏರ್ಪಡಿಸಿದ್ದ ಭಕ್ತ ಹಿತ ಚಿಂತನ ಸಮಾವೇಶದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿ, ಸ್ವಾರ್ಥರಹಿತ ಬದುಕಿಗೆ ಬೆಲೆ ಮತ್ತು ಬಲವಿದೆ. ಧರ್ಮಾಚರಣೆ ಮರೆತರೆ ಅಪಾಯ ನಿಶ್ಚಿತ. ಶಸ್ತç ಪ್ರಭುತ್ವ ಮತ್ತು ಅರ್ಥಗಳು ಅಜ್ಞಾನಿಯ ಕೈಯಲ್ಲಿದ್ದರೆ ಸರ್ವನಾಶವಾಗುತ್ತದೆ ಎಂದರು.

ಶ್ರೀ ಡಾ.ರೇವಣಸಿದ್ಧ ಶಿವಾಚಾರ್ಯರು ಮಾತನಾಡಿ, ಜೀವನದಲ್ಲಿ ಬದಲಾವಣೆ ಮತ್ತು ಬೆಳವಣಿಗೆ ಎರಡೂ ಬೇಕು. ಬಾಲ್ಯದಲ್ಲಿ ಜ್ಞಾನ, ಯೌವನದಲ್ಲಿ ಸಂಪತ್ತು, ವೃದ್ಧಾಪ್ಯದಲ್ಲಿ ಪುಣ್ಯ ಸಂಪಾದಿಸುವುದು ಶ್ರೇಷ್ಠ. ಸುಳ್ಳಿಗೆ ಮೊಸಕ್ಕೆ ಹಲವು ದಾರಿ. ಧರ್ಮಕ್ಕೊಂದೆ ದಾರಿ. ಯುವ ಜನಾಂಗದಲ್ಲಿ ಅದ್ಭುತ ಶಕ್ತಿಯಿದೆ. ಆ ಶಕ್ತಿ ಜನ ಹಿತಕ್ಕಾಗಿ ಬಳಕೆ ಆಗಲಿ ಎಂದರು.

ಶ್ರೀ ಚಂದ್ರಗುAಡ ಶಿವಾಚಾರ್ಯರು, ಶ್ರೀ ಚಂದ್ರಶೇಖರ ಶಿವಾಚಾರ್ಯರು, ಶ್ರೀ ಡಾ.ರಾಜಶೇಖರ ಶಿವಾಚಾರ್ಯರು, ಶ್ರೀ ರೇವಣಸಿದ್ಧ ಚರಂತೇಶ್ವರ ಶಿವಾಚಾರ್ಯರು, ಶ್ರೀ ರುದ್ರಮುನಿ ಶಿವಾಚಾರ್ಯರು, ಶ್ರೀ ಸಿದ್ಧರೇಣುಕ ಶಿವಾಚಾರ್ಯರು, ಶ್ರೀ ಅಭಿನವ ಕಾರ್ತಿಕೇಶ್ವರ ಶಿವಾಚಾರ್ಯರು, ಶ್ರೀ ರಾಜಶೇಖರ ಶಿವಾಚಾರ್ಯರು, ಶ್ರೀ ಸಿದ್ಧಲಿಂಗ ಶಿವಾಚಾರ್ಯರು, ಶ್ರೀ ಸಿದ್ಧಲಿಂಗ ಶಿವಾಚಾರ್ಯರು, ಶ್ರೀ ಸೋಮಶೇಖರ ಶಿವಾಚಾರ್ಯರು, ಶ್ರೀ ವೀರಭದ್ರ ಶಿವಾಚಾರ್ಯರು, ಗಿರೆಪ್ಪಾ ಮುತ್ಯಾ, ಪ್ರಮುಖರಾದ ರಾಜು ಭೀಮಳ್ಳಿ, ಶಿವಶರಣಪ್ಪ ಸೀರಿ ಇತರರಿದ್ದರು.

ಗುರುಲಿಂಗಯ್ಯ ಹಿತ್ತಲಶಿರೂರು ಪ್ರಾರ್ಥನಾ ಗೀತೆ ಜರುಗಿತು. ಹಣಮಂತ್ರಾಯ ಅಟ್ಟೂರು ಸ್ವಾಗತಿಸಿದರು. ನಾಗಲಿಂಗಯ್ಯ ಹಿರೇಮಠ ಪ್ರಾಸ್ತಾವಿಕ ಮಾತನಾಡಿದರು. ಶ್ರೀ ಶಿವಮೂರ್ತಿ ಶಿವಾಚಾರ್ಯರು ನಿರೂಪಣೆ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net