ಖಾದಿ ಘಟಕಗಳಿಗುಂಟು ಆರ್ಥಿಕ ನೆರವು

CTD ARIVU PROGRAMM----
Published on

ಚಿತ್ರದುರ್ಗ: ಚಿತ್ರದುರ್ಗದಲ್ಲೂ ಉತ್ತಮ ಖಾದಿ ತಯಾರಿಕಾ ಘಟಕಗಳಿವೆ. ಇವುಗಳ ಸ್ಥಾಪನೆಗೆ ಹಣಕಾಸು ನೆರವು, ತರಬೇತಿ ಇತ್ಯಾದಿ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಕೆವಿಐಸಿ ನಿರ್ದೇಶಕ ಮೋಹನ್‌ರಾವ್ ಹೇಳಿದರು.

ಖಾದಿ ಮತ್ತು ಗ್ರಾಮೀಣ ಕೈಗಾರಿಕಾ ಕಮಿಷನ್ ಹಾಗೂ ಮೈಸೂರಿನ ಶ್ರೀ ಗಂಗಾ ಚಾರಿಟ ಬಲ್ ಟ್ರಸ್ಟ್ ದೊಂದಿಗೆ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಕಾರ‌್ಯಕ್ರಮದಡಿ ನಗರದ ಪತ್ರಿಕಾ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಅರಿವು ಕಾರ‌್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕದಲ್ಲಿ 250ಕ್ಕೂ ಹೆಚ್ಚು ಖಾದಿ ತಯಾರಿಕೆ ಕೇಂದ್ರಗಳಿವೆ. ಅಗತ್ಯ ಸಹಕಾರ ನೀಡಲಾಗುತ್ತಿದೆ ಎಂದು ಹೇಳಿದರು. ಸ್ವಾವಲಂಬಿ ಜೀವನಕ್ಕೆ ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳನ್ನು ಜನರು ಸದುಪಯೋಗ ಪಡಿಸಿಕೊಳ್ಳ ಬೇಕೆಂದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ನಿರ್ದೇಶಕ ನಾಗರಾಜ್ ಮಾತನಾಡಿ, ಸರ್ಕಾರದ ಯೋಜನೆಗಳನ್ನು ಸಮರ್ಥವಾಗಿ ಬಳಸಿಕೊಂಡು ಆರ್ಥಿಕ ಪ್ರಗತಿ ಸಾಧಿಸಬೇಕಿದೆ ಎಂದರು.

ಕರ್ನಾಟಕ ಪ್ರಗತಿ ಗ್ರಾಮೀಣ ಬ್ಯಾಂಕ್ ಹಿರಿಯ ವ್ಯವಸ್ಥಾಪಕಿ ಕಾವ್ಯಾ ಮಾತನಾಡಿದರು. ಟ್ರಸ್ಟ್ ಅಧ್ಯಕ್ಷ ರಾಜ್‌ಕಾಮಯ್ಯ, ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ‌್ಯದರ್ಶಿ ವೈ.ಕುಮಾರ್, ಕೊಲ್ಲಿಲಕ್ಷ್ಮೀ, ದಿವ್ಯಶ್ರೀ,ಪ್ಯಾರಿಜಾನ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net