ಖಾಲಿ ನಿವೇಶನದಲ್ಲಿ ಗಾಂಜಾ ಬೆಳೆದಿದ್ದವನ ಬಂಧನ

file79dgbf3jbx31dc7fu66w016345834171666962237
Published on

ಮೈಸೂರು: ಖಾಲಿ ನಿವೇಶನದಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ಆರೋಪಿಯನ್ನು ಉದಯಗಿರಿ ಪೊಲೀಸರು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಲಾಲ್‌ಘಾಟ್‌ನಲ್ಲಿರುವ ಸರ್ವೇ ನಂ. 48ರ ಖಾಲಿ ನಿವೇಶನದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ಸ್ಥಳಕ್ಕೆ ಪೊಲೀಸರು ಭಾನುವಾರ ದಾಳಿ ಮಾಡಿ, 3 ಲಕ್ಷ ರೂ. ಮೌಲ್ಯದ 14 ಕೆಜಿ 800 ಗ್ರಾಂ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net