ಖಾಲಿಯಿರುವ ಹುದ್ದೆಗಳನ್ನು ಭರ್ತಿಗೊಳಿಸಿ ಮಾಡಿ

13 YERRISWAMY 08
Published on

ಬಳ್ಳಾರಿ : ರೈಲ್ವೆ ಸೌಲಭ್ಯಗಳ ಸಮಗ್ರ ಬಲವರ್ಧನೆ ಮತ್ತು ಅಭಿವೃದ್ಧಿಗೆ ಅಗತ್ಯ ಕ್ರಮಕ್ಕೆ ಆಗ್ರಹಿಸಿ, ಇಲ್ಲಿನ ರೈಲು ನಿಲ್ದಾಣದಲ್ಲಿ ಎಐಡಿಎಸ್‌ಒ ಸಂಘಟನೆಯ ಪದಾಧಿಕಾರಿಗಳು ಪ್ರತಿಭಟಿಸಿದರು.
ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಎ. ಪಂಪಾಪತಿ ಕೋಳೂರು ಮಾತನಾಡಿ, ಖಾಸಗೀಕರಣ ಮತ್ತು ವ್ಯಾಪಾರೀಕರಣದ ಕ್ರಮಗಳು ರೈಲ್ವೆ ಪ್ರಯಾಣಿಕರನ್ನು ಬಾಣಲೆಯಿಂದ ಬೆಂಕಿಗೆ ತಳ್ಳಿವೆ. ದೂರ ಯಾನದ ರೈಲುಗಳಲ್ಲಿನ ಪ್ರಯಾಣವು ದುಸಾಧ್ಯವಾಗಿದೆ. ಸಾಮಾನ್ಯ ಜನರು ಅಸಹನೀಯ ಪರಿಸ್ಥಿತಿಗಳಲ್ಲಿ ಪ್ರಯಾಣಿಸುವಂತಾಗಿದೆ. ಇತ್ತೀಚಿನ ದಿನಗಳಲ್ಲಿ ರೈಲ್ವೆ ಪ್ರಯಾಣದಲ್ಲಿ ಸುರಕ್ಷತೆ ಎಂಬುದು ತೀವ್ರ ಆತಂಕಕಾರಿಯಾಗಿದೆ. ಪ್ರಯಾಣಿಕರ ಸುರಕ್ಷತೆಗೆ ಯಾವುದೇ ಖಾತರಿ ಇಲ್ಲದಂತಾಗಿದೆ ಎಂದು ಆರೋಪಿಸಿದರು.
ರೈಲ್ವೆಯಲ್ಲಿ 3.5 ಲಕ್ಷ ಸಿಬ್ಬಂದಿ ಕೊರತೆ ಇದೆ. ಗ್ರೂಪ್ ಸಿ ಮತ್ತು ಲೆವೆಲ್ 1 ವರ್ಗಗಳಲ್ಲಿ ಸುಮಾರು 2.74 ಲಕ್ಷ ಹುದ್ದೆಗಳು ಖಾಲಿ ಇವೆ. ಮೆಕ್ಯಾನಿಕ್ ಮತ್ತು ಎಂಜಿನಿಯರಿಂಗ್ ವಿಭಾಗದಲ್ಲಿ 1.57 ಲಕ್ಷ ಹುದ್ದೆಗಳು ಖಾಲಿ ಇವೆ. ಶುಚಿತ್ವ, ನಿರ್ವಹಣೆ ಮತ್ತು ಕೆಲವು ಭದ್ರತೆಗೆ ಸಂಬಂಧಿಸಿದ ಗಗಳನ್ನು ಈಗಾಗಲೇ ಖಾಸಗಿ ಗುತ್ತಿಗೆದಾರರಿಗೆ ಹೊರಗುತ್ತಿಗೆ ನೀಡಲಾಗಿದೆ. 2019ರಿಂದ 2023 ರವರೆಗೆ ಒಟ್ಟು 162 ರೈಲು ಅಪಘಾತಗಳು ಸಂಭವಿಸಿವೆ. ಕೇಂದ್ರ ಸರಕಾರವು ಖಾಲಿ ಇರುವ ಹುದ್ದೆಗಳನ್ನು ತಕ್ಷಣವೇ ರ್ತಿ ಮಾಡಲು ಮತ್ತು ಸೇವೆಗಳ ಅನುಗುಣವಾಗಿ ಹೆಚ್ಚಿನ ಉದ್ಯೋಗಾವಕಾಶಗಳಿಗೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net