ತಿಪಟೂರು: ಆರರಿಂದ ಏಳು ದಿನದ ನವಜಾತ ಹೆಣ್ಣು ಶಿಶುವನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ಬಿಟ್ಟು ಹೋಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಗುರುವಾರ ನಗರದ ಖಾಸಗಿ ಆಸ್ಪತ್ರೆಯ ಸ್ವಾಗತ ವಿಭಾಗದ ಬಳಿಯ ಟೇಬಲ್ ಮೇಲೆ ನವಜಾತ ಶಿಶು ಇರುವುದನ್ನು ಗಮನಿಸಿದ ಸಿಬ್ಬಂದಿ, ವೈದ್ಯರ ಗಮನಕ್ಕೆ ತಂದಿದ್ದಾರೆ. ಮಗು ಪರೀಸಿದ ವೈದ್ಯರು ನಗರಠಾಣೆಗೆ ಮತ್ತು ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ಪರಿಶೀಲಿಸಿ ಮಗುವನ್ನು ತುಮಕೂರಿನ ಬಾಲಭವನಕ್ಕೆ ಸ್ಥಳಾಂತರಿಸಿದರು. ಸದ್ಯ ಮಗುವಿಗೆ ತುಮಕೂರಿನ ಜಿಲ್ಲಾಸ್ಪತ್ರೆಯ ಎನ್ಐಸಿಯು ಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯವಾಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.