ಖಾಸಗಿ ಬಸ್‌ನಲ್ಲಿ ಪ್ರಯಾಣ ಬೆಳೆಸಿದ ಭಕ್ತರು

30 HANUR 4
Published on

ಹನೂರು: ಸರ್ಕಾರದ ವತಿಯಿಂದ ಮೈಸೂರಿನಲ್ಲಿ ಆಯೋಜಿಸಿದ್ದ ಗೃಹಲಕ್ಷ್ಮೀ ಯೋಜನೆ ಉದ್ಘಾಟನಾ ಕಾರ್ಯಕ್ರಮಕ್ಕೆ ಮಹಿಳೆಯರು ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೆರಳಿದ್ದ ಹಿನ್ನೆಲೆಯಲ್ಲಿ ಬುಧವಾರ ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಭಕ್ತರು ತೊಂದರೆ ಅನುಭವಿಸುವಂತಾಯಿತು.

ಸಂಜೆ 5 ಗಂಟೆ ವೇಳೆಯಲ್ಲಿ ಮೈಸೂರು, ಬೆಂಗಳೂರು, ಮಳವಳ್ಳಿ ಸೇರಿದಂತೆ ಇತರ ಕಡೆಗಳಿಗೆ ತೆರಳುವ ಸುಮಾರು 70ಕ್ಕೂ ಹೆಚ್ಚು ಭಕ್ತರು ಅದರಲ್ಲೂ ಹೆಚ್ಚಾಗಿ ಮಹಿಳೆಯರು ನಿಲ್ದಾಣದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಕಾದು ಕುಳಿತಿದ್ದರು. ಈ ಬಗ್ಗೆ ಸಂಚಾರ ನಿಯಂತ್ರಣಾಧಿಕಾರಿ ಅವರನ್ನು ಭಕ್ತರು ವಿಚಾರಿಸಿದಾಗ, ಇಲ್ಲಿಗೆ ಆಗಮಿಸುವ ಬಸ್‌ಗಳಲ್ಲಿ ತೆರಳುವಂತೆ ತಿಳಿಸಿದ್ದಾರೆ. ಇದರಿಂದ ಬೇಸತ್ತ ಹಲವರು ಖಾಸಗಿ ಬಸ್‌ನಲ್ಲಿ ಪ್ರಯಾಣ ಬೆಳೆಸಿದರು.

ಈ ಸಂಬಂಧ ವಿಜಯವಾಣಿ ಡಿಪೋ ವ್ಯವಸ್ಥಾಪಕ ಮುತ್ತುರಾಜು ಅವರನ್ನು ಸಂಪರ್ಕಿಸಿದಾಗ, ಕೂಡಲೇ ಬೆಂಗಳೂರು ಕಡೆಗೆ ಒಂದು ಬಸ್ ಬಿಡಲಾಯಿತು. ಇದರಿಂದ ಬಸ್ ನಿಲ್ದಾಣದಲ್ಲಿ ಕಾದು ಕುಳಿತಿದ್ದ ಭಕ್ತರು ನೂಕುನುಗ್ಗಲಿನಲ್ಲಿ ತೆರಳಿ ನಿಂತುಕೊಂಡೇ ಪ್ರಯಾಣ ಬೆಳೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net