ಖಾಸಗಿ ಶಿಕ್ಷಣ ಸಂಸ್ಥೆಗೂ ಮಿಗಿಲಾಗಿ ಸರ್ಕಾರಿ ಶಾಲೆ ನಿರ್ಮಾಣ

ctd ----6
Published on

ಚಿತ್ರದುರ್ಗ: ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಮೀರಿಸುವ ರೀತಿಯಲ್ಲಿ ಹೊಳಲ್ಕೆರೆಯಲ್ಲಿ ಗುಣಮಟ್ಟದ ಶಾಲೆ ನಿರ್ಮಿಸಲಾಗಿದೆ ಎಂದು ಶಾಸಕ ಡಾ.ಎಂ. ಚಂದ್ರಪ್ಪ ಹೇಳಿದರು.

ಪಟ್ಟಣದ ಎಂ.ಎಂ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಎನ್‌ಇಎಸ್ ಶಾಲೆಯ ಸಾಂಸ್ಕೃತಿಕ ಸಂಭ್ರಮದಲ್ಲಿ ಮಾತನಾಡಿ, ಮಕ್ಕಳು ಪಠ್ಯಕ್ಕೆ ಸೀಮಿತವಾಗದೆ ಆಟೋಟಗಳಲ್ಲೂ ತೊಡಗಿಕೊಂಡು ಪ್ರತಿಭೆ ಅನಾವರಣಗೊಳಿಸಲಿ ಎಂಬ ಕಾರಣಕ್ಕೆ 15 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾಂಗಣ, 5 ಕೋಟಿ ರೂ.ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ, ಈಜುಕೊಳ ನಿರ್ಮಿಸಲಾಗಿದೆ ಎಂದರು.

ಉಪ ಪ್ರಾಚಾರ್ಯ ಗೋವಿಂದನಾಯ್ಕ, ಪುರಸಭೆ ಅಧ್ಯಕ್ಷ ವಿಜಯಸಿಂಹ ಖಾಟ್ರೋತ್, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್, ಗಿರೀಶ್, ಶಂಕರಪ್ಪ, ಮಾಲಾಶ್ರೀ, ಶಿವರುದ್ರಪ್ಪ, ಗಾಯತ್ರಿ, ಶ್ರೀಕಾಂತ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net