ಖೇಲೋ ಇಂಡಿಯಾ ಕ್ರೀಡಾಪಟುಗಳಿಗೆ ಸಹಕಾರಿ

Uniform
Published on

ಚಿತ್ರದುರ್ಗ: ಕೇಂದ್ರ ಸರ್ಕಾರದ ಖೇಲೋ ಇಂಡಿಯಾದಿಂದ ಮಕ್ಕಳು ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮಲು ಸಹಕಾರಿಯಾಗಲಿದೆ ಎಂದು ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಸುಚೇತಾ ನೆಲವಗಿ ಹೇಳಿದರು.

ಒಳಾಂಗಣ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಷಟಲ್ ಬ್ಯಾಡ್ಮಿಂಟನ್ ಉಚಿತ ತರಬೇತಿಯಲ್ಲಿ ಕ್ರೀಡಾಪಟುಗಳಿಗೆ ಗುರುವಾರ ಉಚಿತ ಸಮವಸ್ತ್ರ, ಪರಿಕರ ವಿತರಿಸಿ ಮಾತನಾಡಿದರು.

ಮಕ್ಕಳು ತರಬೇತಿ ಪಡೆದು ಉದಯೋನ್ಮುಖ ಕ್ರೀಡಾಪಟುಗಳಾಗಿ, ತಮ್ಮ ಪ್ರತಿಭೆ ಅನಾವರಣಗೊಳಿಸಿ. ಸರ್ಕಾರಿ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಅಂತರರಾಷ್ಟ್ರೀಯ ಕ್ರೀಡಾಪಟು ಎನ್.ಡಿ.ಕುಮಾರ್, ತರಬೇತುದಾರ ಗುರುಮೂರ್ತಿ, ಬೆಸ್ಕಾಂ ಅಧಿಕಾರಿ ನಾಗರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net