ಗಂಜಿಗೆರೆ ಬಸವೇಶ್ವರಸ್ವಾಮಿ ರಥೋತ್ಸವ ಸಂಭ್ರಮ

nuggehalli jaatre
Published on

ನುಗ್ಗೇಹಳ್ಳಿ: ಹೋಬಳಿಯ ಗಂಜಿಗೆರೆ ಗ್ರಾಮದ ಶ್ರೀಬಸವೇಶ್ವರ ಸ್ವಾಮಿ ರಥೋತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.

ಬೆಳಗ್ಗೆ ಮೂಲ ದೇವರಿಗೆ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಹೂವಿನ ಅಲಂಕಾರ, ಮಹಾಮಂಗಳಾರತಿ ನೆರವೇರಿಸಲಾಯಿತು. ಮೂಲ ದೇಗುಲದಿಂದ ಮೆರೆ ದೇವರ ಉತ್ಸವ ಮಂಗಳವಾದ್ಯದೊಂದಿಗೆ ಊರಿನ ಪ್ರಮುಖ ಬೀದಿಗಳಲ್ಲಿ ಸಾಗಿತು. ಗ್ರಾಮದ ದೇಗುಲದ ಮುಂಭಾಗದಲ್ಲಿದ್ದ ರಥದಲ್ಲಿ ದೇವರನ್ನು ಪ್ರತಿಷ್ಠಾಪಿಸಿ ರಥಕ್ಕೆ ನೈವೇದ್ಯ, ಮಂಗಳಾರತಿ ನೆರವೇರಿಸಲಾಯಿತು. ಭಕ್ತರು ಜಯಘೋಷದೊಂದಿಗೆ ರಥವನ್ನು ಎಳೆದರು. ಭಕ್ತರು ರಥಕ್ಕೆ ದವನ, ಹಣ್ಣು ಎಸೆದು ಭಕ್ತಿ ಸಮರ್ಪಿಸಿದರು. ಭಕ್ತರಿಗೆ ಪಾನಕ, ಫಲಹಾರ, ಮಜ್ಜಿಗೆ ವಿತರಿಸಲಾಯಿತು.

ಶಾಸಕ ಸಿ.ಎನ್.ಬಾಲಕೃಷ್ಣ, ರಥೋತ್ಸವಕ್ಕೆ ಚಾಲನೆ ನೀಡಿ ಪೂಜೆ ಸಲ್ಲಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜತ್ತೇನಹಳ್ಳಿ ರಾಮಚಂದ್ರು, ಬೆಳಗಳ್ಳಿ ಪುಟ್ಟಸ್ವಾಮಿ, ಗುರುಚನ್ನಬಸಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆಂಪೇಗೌಡ, ಗ್ರಾಮ ಪಂಚಾಯತಿ ಸದಸ್ಯ ಜಿ.ಪಿ.ಕೃಷ್ಣ, ಅಶೋಕ್, ಜಯಣ್ಣ, ನೇರಲಕೆರೆ ಶ್ರೀನಿವಾಸ್, ಚಂದ್ರಶೇಖರ್, ಅನಿಲ್, ದೊರೆ, ಉಪೇಂದ್ರ, ರಂಗೇಗೌಡ, ಶೇಖರ್, ಗಿರೀಶ್, ಧನಂಜಯ, ಎಂ.ರಮೇಶ್ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net