ಗಂಡ-ಹೆಂಡತಿ ಮನಸ್ಸು ಒಂದಾದರೆ ಅದೇ ಸ್ವರ್ಗ

CTD MURUGA
Published on

ಚಿತ್ರದುರ್ಗ: ಮದುವೆಗಳು ಸ್ವರ್ಗದಲ್ಲಿ ನಿರ್ಧಾರವಾಗುವುದಿಲ್ಲ, ಸಂಸಾರದಲ್ಲಿ ಗಂಡ-ಹೆಂಡತಿ ಮನಸ್ಸು ಒಂದಾದರೇ ಅದೇ ಸ್ವರ್ಗ ಎಂದು ದಾವಣಗೆರೆ ವಿರಕ್ತ ಮಠದ ಡಾ. ಶ್ರೀ ಬಸವಪ್ರಭು ಸ್ವಾಮೀಜಿ ಹೇಳಿದರು.
ಮಠದಲ್ಲಿ ಗುರುವಾರ ಏರ್ಪಡಿಸಿದ್ದ 34ನೇ ವರ್ಷದ 9ನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವ ಹಾಗೂ ಶಿಕ್ಷಕರ ದಿನಾ ಚರಣೆ ಸಾನ್ನಿಧ್ಯ ವಹಿಸಿ ಮಾತನಾಡಿ, ಮಠದಲ್ಲಿ ಈವರೆಗೆ 18 ಸಾವಿರ ಜೋಡಿಗಳು ದಾಂಪತ್ಯಕ್ಕೆ ಜೀವನಕ್ಕೆ ಕಾಲಿಟ್ಟಿರುವುದು ಇತಿಹಾಸವಾಗಿದೆ. ಸತಿ-ಪತಿಗಳು ಪರಸ್ಪರ ಒಬ್ಬರನ್ನೊಬ್ಬರು ಗೌರವಿಸುತ್ತ ಸಂಸಾರವನ್ನು ಸಾಗಿಸಬೇಕೆಂದರು.
ಉಳವಿಯ ಶ್ರೀ ಬಸವಲಿಂಗಮೂರ್ತಿ ಸ್ವಾಮೀಜಿ ಮಾತನಾಡಿ, ಯಾವುದಕ್ಕೆ ಸಾವು ಇಲ್ಲವೊ, ಯಾವುದು ನಿರಂತರವಾಗಿರುತ್ತದೆಯೋ ಅದನ್ನು ಕಲಿಸುವಂತದ್ದೇ ಶಿಕ್ಷಣ. ಇಂತಹ ಶಿಕ್ಷಣವನ್ನು ನೀಡುವ ಗುರುವನ್ನು ನಾವೆಲ್ಲ ಗೌರವಿಸಬೇಕು. ಈ ದಿನ ಹೊಸ ಜೀವನಕ್ಕೆ ಕಾಲಿಡುತ್ತಿರುವ ದಂಪತಿಗಳು ಹೊಂದಿಕೊಂಡು ಬದುಕುವ ಗುಣ ಬೆಳೆಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.
ಶ್ರೀ ತಿಪ್ಪೇರುದ್ರ ಸ್ವಾಮೀಜಿ ಮಾತನಾಡಿ, ಆಧುನಿಕ ಕಾಲಘಟ್ಟದಲ್ಲಿ ಅನಾಥಾಶ್ರಮಗಳು, ವೃದ್ಧಾಶ್ರಮಗಳು ಹೆಚ್ಚಾಗುತ್ತಿವೆ. ಮದುವೆಯಾಗಿ ಗಂಡನ ಮನೆಗೆ ಹೋಗುವ ಹೆಣ್ಣುಮಕ್ಕಳು, ಆ ಮನೆಯನ್ನು ಇಬ್ಭಾಗ ಮಾಡದೆ ಅತ್ತೆ-ಮಾವನನ್ನು ತಂದೆ-ತಾಯಿ ಸ್ಥಾನದಲ್ಲಿ ನೋಡಬೇಕು ಎಂದು ತಿಳಿಸಿರು.
ಪೈಲ್ವಾನ್ ತಿಪ್ಪೇಸ್ವಾಮಿ ಇತರರಿದ್ದರು. 2 ಜೋಡಿಗಳ ವಿವಾಹ ನೆರವೇರಿತು. ಜಮುರಾ ಕಲಾವಿದರು ಪ್ರಾರ್ಥಿಸಿದರು. ವಚನಕಮ್ಮಟದ ನಿರ್ದೇಶಕ ವೀರಭದ್ರಪ್ಪ ಸ್ವಾಗತಿಸಿದರು. ನಿವೃತ್ತ ಪ್ರಾಚಾರ್ಯ ಟಿ.ಪಿ.ಜ್ಞಾನಮೂರ್ತಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net