ಗಂದಗೆ ಅಭಿನಂದನಾ ಸಮಾರಂಭ

Rajendrakumar Gandge
Published on

ಬೀದರ್: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ನೇಮಕಗೊಂಡ ರಾಜೇಂದ್ರಕುಮಾರ ಗಂದಗೆ ಅವರಿಗೆ ಸಂಘದ ಜಿಲ್ಲಾ ಘಟಕದ ವತಿಯಿಂದ ಇಲ್ಲಿಯ ಪ್ರತಾಪನಗರದ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಸೋಮವಾರ (ಅ.17) ಸಂಜೆ 5.30ಕ್ಕೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಗಂದಗೆ ಅವರು ಸತತ ಎರಡನೇ ಅವಧಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದಾರೆ. ನೌಕರರ ಅನೇಕ ಬೇಡಿಕೆಗಳ ಈಡೇರಿಕೆ ಹಾಗೂ ಸಮಸ್ಯೆಗಳ ಪರಿಹಾರದ ಮೂಲಕ ಜಿಲ್ಲೆಯ ಸರ್ಕಾರಿ ನೌಕರರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮಾದರಿ ಕಾರ್ಯಗಳ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ. ಹೀಗಾಗಿ ಅವರಿಗೆ ರಾಜ್ಯ ಉಪಾಧ್ಯಕ್ಷ ಹುದ್ದೆ ಒಲಿದು ಬಂದಿದೆ ಎಂದು ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಾಜಶೇಖರ ಮಂಗಲಗಿ ತಿಳಿಸಿದ್ದಾರೆ.
ಜಿಲ್ಲೆಯಿಂದ ಮೊದಲ ಬಾರಿಗೆ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ನೇಮಕಗೊಂಡ ಪ್ರಯುಕ್ತ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಂಘದ ಜಿಲ್ಲಾ, ತಾಲ್ಲೂಕು ಘಟಕಗಳ ಪದಾಧಿಕಾರಿಗಳು, ನಾಮನಿರ್ದೇಶಿತ ಸದಸ್ಯರು ಹಾಗೂ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net